No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ

kalpa News by kalpa News
October 13, 2021
in ಬೆಂಗಳೂರು ನಗರ
0
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆಯ ಜವಾಬ್ದಾಾರಿ ತೆಗೆದುಕೊಂಡ ಮೇಲೆ ಅವರ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇನೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ವೇತನ ದೊರಕಿಸಿ ಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ.35ರಷ್ಟು ಮೀರದಂತೆ ನೌಕರರನ್ನು 6ನೇವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಸಚಿವರು ಹೇಳಿದರು.

ಸಿ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6 ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ನೀಡುಲಾಗುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಿ ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಕಾಯಂ ಅರ್ಚಕರು ಇರುವುದಿಲ್ಲ. ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಲ್ಲ ದೇವಸ್ಥಾನಗಳಿಗೆ ತಸ್ತಿಕ ಹಣ 19 ಕೋಟಿ ರೂ. ಬಾಕಿ ಇದ್ದು ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು. ಇನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ ಮಾರ್ಗನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್‌ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಿಗೂ ಇದು ಪೂರಕವಾಗಲಿದೆ ಎಂದು ವಿವರಿಸಿದರು.

ವಿಜಯದಶಮಿ ದಿನ ರಾಜ್ಯದ ಎಲ್ಲ ಜನತೆಯ ಆರೋಗ್ಯಕ್ಕಾಗಿ ವಿಶೇಷ ಪೂಜೆ, ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಜೀವ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.  ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದರು.

ಹಿಂದು ಧರ್ಮ ಶಾಸ್ತ್ರ ಪುರಾಣದಲ್ಲಿ ವಿಜಯದಶಮಿಯನ್ನು ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಯನ್ನು ಸಂಹರಿಸಿ ವಿಜಯವನ್ನು ಆಚರಿಸುವ ದಿನ. ಆದ್ದರಿಂದ ಈ ದಿನ ಶ್ರೀ ಭಗವತಿ ಮತ್ತು ಭಗವಂತನನ್ನು ವಿಶೇಷವಾಗಿ ಪ್ರಾರ್ಥಿಸಿ ಪೂಜಿಸಿದರೆ, ವಿಶೇಷ ಫಲ ಹೊಂದಬಹುದೆಂದು ಶಾಸ್ತ್ರ ವಿಧಿತವಾಗಿದೆ. ಅಲ್ಲದೇ ಭಕ್ತರ ನಂಬಿಕೆಯೂ ಆಗಿರುವುದರಿಂದ ಪ್ರಾಕೃತಿಕವಾಗಿ ಯಾರಿಗೂ ದುಷ್ಪರಿಣಾಮ ಆಗದಂತೆ ವಿಜಯ ದಶಮಿಯ ದಿನ ಅಕ್ಟೋಬರ 15 ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕೊರೋನಾ ಸಂಕಟ ದೂರ ಮಾಡಿ ಜನತೆಯ ಆರೋಗ್ಯ ಕಾಯುವಂತೆ ವಿಶೇಷ ಪೂಜೆ ನೆರವೇರಿಸಲು ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದೇ ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಪ್ರವೇಶಕ್ಕೆ ಡ್ರೆಸ್ ಕೋಡ್ ಮಾಡುವ ಬಗ್ಗೆ ನನ್ನ ಮುಂದೆ ಯಾವುದೇ ಪ್ರಸ್ತಾಪ ಬಂದಿಲ್ಲ. ಧಾರ್ಮಿಕ ಪರಿಷತ್ ನಲ್ಲಿ ಚರ್ಚೆಯಾಗಿದ್ದರೆ ಮಾಹಿತಿ ಪಡೆದು ಪರಿಶೀಲನೆ ಮಾಡಲಾಗುವುದು. ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಮುಜಾವರ ಅವರನ್ನು ನೇಮಕ ಮಾಡಿದ್ದನ್ನು ರದ್ದು ಪಡಿಸಿರುವ ಹೈಕೋರ್ಟ್ ಆದೇಶದ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚೆಯಾಗಿದೆ ಎಂದು ಸಚಿವರಿಗೆ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಹಾಗೂ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Shashikala JolleNews in KannadaNews KannadaState NewsVijayadashamiಬೆಂಗಳೂರುಮುಜರಾಯಿ ಇಲಾಖೆವಿಜಯದಶಮಿಸಚಿವೆ ಶಶಿಕಲಾ ಜೊಲ್ಲೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಅನಸ್ತೇಶಿಯಾ ಸಮ್ಮೇಳನಕ್ಕೆ ಸಾಕ್ಷಿಯಾದ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜು

Next Post

ಮನುಷ್ಯನ ಮಾನಸಿಕ, ಬೌದ್ಧಿಕ ವಿಕಾಸಕ್ಕೆ ಸಾಹಿತ್ಯ ತುಂಬಾ ಪರಿಣಾಮಕಾರಿ: ಸಾಹಿತಿ ನೆಗವಾಡಿ ರಾಜಶೇಖರ ಪಾಟೀಲ್ ಅಭಿಪ್ರಾಯ

kalpa News

kalpa News

Next Post
ಮನುಷ್ಯನ ಮಾನಸಿಕ, ಬೌದ್ಧಿಕ ವಿಕಾಸಕ್ಕೆ ಸಾಹಿತ್ಯ ತುಂಬಾ ಪರಿಣಾಮಕಾರಿ:  ಸಾಹಿತಿ ನೆಗವಾಡಿ ರಾಜಶೇಖರ ಪಾಟೀಲ್ ಅಭಿಪ್ರಾಯ

ಮನುಷ್ಯನ ಮಾನಸಿಕ, ಬೌದ್ಧಿಕ ವಿಕಾಸಕ್ಕೆ ಸಾಹಿತ್ಯ ತುಂಬಾ ಪರಿಣಾಮಕಾರಿ: ಸಾಹಿತಿ ನೆಗವಾಡಿ ರಾಜಶೇಖರ ಪಾಟೀಲ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL