ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ #Heavy Rain ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಅ.16ರಿಂದ 22ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಪ್ರಮುಖವಾಗಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಸಿಬಿ ಪುರ, ಮಂಡ್ಯ, ತುಮಕೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಹಾವೇರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಇನ್ನು, ಬೆಂಗಳೂರಿನ ಮಟ್ಟಿಗೆ ನೋಡುವುದಾದರೆ ಮಹಾನಗರದ ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















