ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೃಷಿಯನ್ನು ಲಾಭದಾಯಕವಾಗಿ ಪರಿವರ್ತಿಸಿ, ರೈತರನ್ನು ಸಬಲೀಕರಣಗೊಳಿಸಲು ಎಲ್ಲಾ ತಾಂತ್ರಿಕ, ವೈಜ್ಞಾನಿಕ ನೆರವನ್ನು ಪರಿಣಾಮಕಾರಿಯಾಗಿ ವರ್ಗಾವಣೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ Minister Cheluvrayaswamy ಸೂಚನೆ ನೀಡಿದರು.
ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ,ಜಲಾನಯನ ಇಲಾಖೆಗಳು, ವಿಶ್ವವಿದ್ಯಾನಿಲಗಳ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ವಿಶ್ವ ವಿದ್ಯಾನಿಲಯಗಳು ರೈತರಿಗೆ ಆಪ್ತವಾಗಬೇಕು, ಕೃಷಿ ವಿಜ್ಞಾನಿಗಳನ್ನು ತಯಾರು ಮಾಡುವುದರ ಜೊತೆಯಲ್ಲಿ ಯಶಸ್ವಿ ಸಂಶೋಧನೆಗಳ ಫಲವನ್ನು ಸಕಾಲದಲ್ಲಿ ರೈತರಿಗೆ ತಲುಪಿಸಬೇಕು ಎಂದರು.

ಕೃಷಿ ವಿಚಕ್ಷಣಾ ದಳ ಚುರುಕಾಗಿ ಕೆಲಸ ಮಾಡಬೇಕು. ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಿ. ನಕಲಿ ರಸಗೊಬ್ಬರ ಬಿತ್ತನೆ ಬೀಜ ಮಾರಾಟ ,ಸಾಗಾಟದ ಪತ್ತೆ ಹಚ್ಚಿ ಕಟ್ಟು ನಿಟ್ಟಿನ ಕ್ರಮವಹಿಸಿ ಎಂದು ಸಚಿವರು ಸೂಚನೆ ನೀಡಿದರು.
ರೈತರ ಅನುಕೂಲದ ದೃಷ್ಠಿಯಿಂದ ಕೃಷಿ ಯಾಂತ್ರೀಕರಣ, ಕೃಷಿ ಭಾಗ್ಯ ಯೋಜನೆ ಚುರುಕುಮಾಡಿ. ಕೃಷಿ ಹಾಗೂ ಕಂದಾಯ ಇಲಾಖೆ ಅನುದಾನದಲ್ಲಿ ಈ ಸಾಲಿನಲ್ಲಿ ಒಟ್ಟು 32000 ಕೃಷಿ ಹೊಂಡ ನಿರ್ಮಾಣ ಪೂರ್ಣ ಗೊಳಿಸಿ ಎಂದು ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.
ನೆಟೆ ರೋಗ ಬಾಕಿ ಪರಿಹಾರ ಆದಷ್ಟು ಬೇಗ ರೈತರ ಖಾತೆಗೆ ವರ್ಗಾವಣೆ ಮಾಡಿ ಎಂದು ಸಚಿವರು ಸೂಚಿಸಿದರು.

ಆರ್ ಐ ಡಿ ಎಫ್ ಯೊಜನೆಯಡಿ ಅನುಮೋದನೆಗೊಂಡ ಕಾಮಗಾರಿಗಳು ವಿಳಂಭವಾಗಿವಾಗಿದ್ದು, ಈಗಾಗಲೇ ಮುಕ್ತಾಯ ಹಂತದಲ್ಲಿ ಇರುವ ಕಟ್ಟಡಗಳನ್ನು ಪೂರ್ಣ ಗಳಸಿ ಸೇವೆಗೆ ಬಳಸಿಕೊಳ್ಳಿ ಎಂದು ಚಲುವರಾಯಸ್ವಾಮಿ ಹೇಳಿದರು
ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅವರು ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.
ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ಜಲಾನಯನ ಇಲಾಖೆ ಆಯುಕ್ತರಾದ ಡಾ. ಗಿರೀಶ್ ಆಯುಕ್ತರಾದ ಶ್ರೀನಿವಾಸ್, ಕೃಷಿ ನಿರ್ದೇಶಕರಾದ ಡಾ ಪುತ್ರ, ಬೆಂಗಳೂರು ಕೃಷಿ ವಿವಿ ಕುಲಪತಿ ಸುರೇಶ್ ಕೃಷಿ ಸಚಿವರು ಅಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು









Discussion about this post