ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಕೆಎಸ್ಆರ್ಟಿಸಿ #KSRTC ತನ್ನ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ.
ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುತ್ತಿಲ್ಲ ಎಂದು ವಿಷ್ಣುವರ್ಧನ. ಎಸ್ ಎಂಬವರು ಕೇಂದ್ರ ಕಚೇರಿಗೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಇನ್ನು ಮುಂದೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪುರುಷರಿಗೆ ಮೀಸಲಿರುವ ಆಸನಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು ಎಂದು ಕೆಎಸ್ಆರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.
Also read: ಎನ್ಇಎಸ್ ಬಿಆರ್ಪಿ ಪಿಯು ಕಾಲೇಜು ಮೇಲ್ದರ್ಜೆಗೆ | ಒಂದು ಕೋಟಿ ರೂ. ವೆಚ್ಚದಲ್ಲಿ ನವೀಕರಣ
ಶಕ್ತಿ ಯೋಜನೆ #Shakthi Scheme ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಕುರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post