ಕಲ್ಪ ಮೀಡಿಯಾ ಹೌಸ್
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಿಸುವುದಕ್ಕಾಗಿ ಮುಂಬರುವ ಮೊಹರಂ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮೊಹರಂ ಆಚರಣೆಯಲ್ಲಿ ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಮುಟ್ಟದೆ ದೂರದಿಂದ ನೋಡುವಂತೆ ಹಾಗೂ ಮೆರವಣಿಗೆಗಳನ್ನು ನಡೆಸದಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಮೊಹರಂ ಆಚರಣೆ ಮಾರ್ಗಸೂಚಿ :
- ಸಾರ್ವಜನಿಕ ಸ್ಥಳಗಳಲ್ಲಿ ಆಲಂ, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯತ್ ಗಳನ್ನು ನಿರ್ಬಂಧಿಸಲಾಗಿದೆ. ಆ.20ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಮೆರವಣಿಗೆ ಮತ್ತು ಪ್ರಾರ್ಥನಾ ಸಭೆಗಳಿಗೆ ನಿಷೇಧ
- ಆಲಂ, ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯತ್ ಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದಲೇ ನೋಡಬೇಕು
- ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಸಭೆ ನಡೆಸಬಾರದು. ಖಬರಸ್ಥಾನಗಳಲ್ಲಿ ಕೇವಲ ದಫನ್ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಮೊಹರಂ ಸಂಬಂಧಿಸಿದ ಆಚರಣೆಗೆ ಅವಕಾಶ ವಿಲ್ಲ.
- ಪ್ರಾರ್ಥನಾ ಸಭೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.
- ಕೋವಿಡ್ ನಿಯಮಗಳೊಂದಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಬೇಕು. ಒಂದು ವೇಳೆ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ 2ರಿಂದ 3 ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಬೇಕು
- ಮಸೀದಿಗಳಲ್ಲಿ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳಬೇಕು.
- ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವವರು ತಮ್ಮ ಮನೆಗಳಿಂದಲೇ ಮುಸಲ್ಲಾ (ಜಾಯನಮಾಜ್) ವನ್ನು ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡಿಕೊಳ್ಳಬಾರದು
- ಮಸೀದಿ ಹೊರತುಪಡಿಸಿ ಸಮುದಾಯ ಭವನ, ಶಾದಿ ಮಹಲ್ ಹಾಗೂ ಖಾಲಿ ಜಾಗಗಳಲ್ಲಿ ಮೊಹರಂ ಆಚರಿಸುವಂತಿಲ್ಲ. ಯಾವುದೇ ಮೆರವಣಿಗೆ ಮತ್ತು ಸಾರ್ವಜನಿಕ ಭಾಷಣ ನಡೆಸುವಂತಿಲ್ಲ
- ಭಕ್ತಾದಿಗಳು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಧ್ವನಿವರ್ಧಕಗಳ ಮೂಲಕ ತಿಳಿಸಬೇಕು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post