ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಂತ್ರಸ್ತೆಯ ಸ್ವಯಂಕೃತ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಜಾಮೀನು ಕೋರಿದ ಆರೋಪಿಯ ಮನವಿಯನ್ನು ತಿರಸ್ಕರಿಸುವ ಮೂಲಕ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆರೋಪಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ನ್ಯಾಯಪೀಠವು ಪೋಕ್ಸೊ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಶಿಕ್ಷಾರ್ಹವಾದ ಪೋಕ್ಸೊ ಕಾಯ್ದೆಯ ಸೆಕ್ಷನ್ 3 ರ ವ್ಯಾಪ್ತಿಯನ್ನು ಪರಿಗಣಿಸುವಾಗ ಅರ್ಜಿದಾರರು ಮತ್ತು ಸಂತ್ರಸ್ತ ಹುಡುಗಿಯ ನಡುವೆ ನಡೆದಿದೆ ಎಂದು ಹೇಳಲಾದ ಲೈಂಗಿಕ ದೌರ್ಜನ್ಯಕ್ಕೆ ಸಂತ್ರಸ್ತ ಬಾಲಕಿಯ ಒಪ್ಪಿಗೆ ಮುಖ್ಯವಲ್ಲ ಎಂದು ಹೇಳಿದೆ.
ಪೋಕ್ಸೋ ಕಾಯ್ದೆ ಪ್ರಕಾರ 18 ವರ್ಷ ಒಳಗಿನವರು ಅಪ್ರಾಪ್ತರೆಂದು ಪರಿಗಣಿಸಲ್ಪಡುತ್ತಾರೆ. ಇನ್ನೂ ಈ ಪ್ರಕರಣದ ಸಂತ್ರಸ್ತೆಗೆ 18 ವರ್ಷ ವಯಸ್ಸು ಆಗಿಲ್ಲ. ಆಕೆ ಲೈಂಗಿಕ ಕ್ರಿಯೆಗೆ ಸಮ್ಮತಿ ನೀಡಿದರೂ ಅದು ಸಮ್ಮತಿಯಾಗಿ ಪರಿಗಣಿಸುವುದಿಲ್ಲ ಎಂಬುದಾಗಿ ಪೋಕ್ಸೋ ಕಾಯ್ದೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಹಾಗೂ ಪ್ರೀತಿ ಮಾಡಲು 18 ವರ್ಷದೊಳಗಿನ ಅಪ್ರಾಪ್ತರಿಗೆ ಅನುಮತಿ ಇರಬಹುದು ಆದರೆ ದೈಹಿಕ ಸಂಪರ್ಕಕ್ಕಾಗಿ ಅಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Also read: ವರಿಷ್ಟರ ತೀರ್ಮಾನಕ್ಕೆ ತಾವು ಬದ್ಧ: ಶಾಸಕ ಕುಮಾರ್ ಬಂಗಾರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post