Read - 2 minutes
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್ ವಿವಾದ #HIjab row ಸಂಬಂಧಿಸಿದಂತೆ ನಿನ್ನೆ ಮೌಖಿಕ ಮಧ್ಯಂತರ ತೀರ್ಪು ನೀಡಿದ್ದ ಹೈಕೋರ್ಟ್ #HIgh Court ಇಂದು ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ಏನಿದೆ ಆದೇಶದಲ್ಲಿ?
- ನಮ್ಮದು ನಾಗರಿಕ ಸಮಾಜವಾಗಿದ್ದು, ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ
ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ - ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು
- ಶಿಕ್ಷಣ ಸಂಸ್ಥೆಗಳು ಅನಿರ್ಧಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ
- ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆ
- ಆದಷ್ಟು ಬೇಗ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ
- ಎಲ್ಲ ಧರ್ಮದ ವಿದ್ಯಾರ್ಥಿಗಳಿಗೂ ಸಮಾನ ನಿರ್ಬಂಧ ಹೇರಿಕೆ
- ತರಗತಿಗಳಲ್ಲಿ ಹಿಜಾಬ್, ಸ್ಕಾರ್ಫ್, ಕೇಸರಿ ಶಾಲು #Kesari Shawl ಧರಿಸುವಂತಿಲ್ಲ
- ತರಗತಿಗಳಲ್ಲಿ ಯಾವುದೇ ಧರ್ಮದ ಭಾವುಟ ತರುವಂತಿಲ್ಲ
- ಮುಂದಿನ ಆದೇಶದವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ
- ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post