ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಂಚನೆ ಆರೋಪದ ಅಡಿಯಲ್ಲಿ ಹಿಂದೂಪರ ಕಾರ್ಯಕರ್ತೆ, ವಾಗ್ಮಿ ಚೈತ್ರಾ ಕುಂದಾಪುರ Chaitra Kundapura ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೇಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆ ಎಂದು ಚೈತ್ರಾ ವಿರುದ್ಧ ಆರೋಪಿಸಲಾಗಿದೆ ಎಂದು ಹೇಳಲಾಗಿದೆ.
ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಹೇಳಿದ್ದರು. ಇಲ್ಲಿ ಚೈತ್ರಾ ಕುಂದಾಪುರ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಮಾತಿನ ಮೂಲಕ ಮರುಳು ಮಾಡಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎನ್ನಲಾಗಿದ್ದು, ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದು, ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ.
ದೂರಿನ ಆಧಾರದಲ್ಲಿ ಪೊಲೀಸರು ಚೈತ್ರಾ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post