ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಜನಸಾಮಾನ್ಯರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮಾತ್ರ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹೇಳಿದ್ದೇನೆ. ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮಾಡಿಲ್ಲ. 6ನೆಯ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರುವುದಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ತಿಳಿಸುತ್ತೇನೆ ಎಂದು ಮಾತ್ರ ಹೇಳಿದ್ದೇನೆ. ಹೀಗಾಗಿ ಸಾರಿಗೆ ನೌಕರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಮುಂಜಾನೆ ತಮ್ಮನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ. ಇದು ಮುಷ್ಕರ ನಡೆಸಲು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮಾತ್ರ ನಾನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
ನಾನು ಈ ಮೇಲ್ಕಂಡ ವಿಷಯವನ್ನು ಮಾತ್ರ ಅವರಿಗೆ ತಿಳಿಸಿರುತ್ತೇನೆ. ಆದರೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರಪತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಇದರಿಂದ ಸಾರಿಗೆ ನೌಕರರಿಗೆ ತಪ್ಪು ಸಂದೇಶ ರವಾನೆಯಾಗಬಾರದು. ಹೀಗಾಗಿ ಈ ಸ್ಪಷ್ಟೀಕರಣವನ್ನು ಕೊಡಲು ಬಯಸುತ್ತೇನೆ ಎಂದು ಅವರು ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post