ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಅವರ ಬೆಂಗಾವಲು ವಾಹನ ಯಾವುದೇ ಅಪಘಾತಕ್ಕೆ ಕಾರಣವಾಗಿರುವುದಿಲ್ಲ ಎಂದು ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.
ಗೃಹ ಸಚಿವರ ಪ್ರವಾಸದ ವೇಳೆಯಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸುತ್ತಿದ್ದಾಗ ಜಿಲ್ಲಾ ಪೊಲೀಸ್ ವಾಹನವೊಂದು ಬೆಂಗಾವಲು ವಾಹನದ ಬಹಳ ಹಿಂದಕ್ಕೆ ಬರುವಾಗ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಇದು ಸಚಿವರ ಗಮನಕ್ಕೆ ಬಾರದೆ ಹೋದ ದುರದೃಷ್ಟಕರ ಘಟನೆಯಾಗಿದೆ. ಹಾಗೂ ಡಿಕ್ಕಿ ಹೊಡೆದು ಅವಘಡ ನಡೆದರೂ ಸಚಿವರು ಲೆಕ್ಕಿಸದೆ ಹೋದರು ಎಂಬ ವರದಿಗಳು ಸತ್ಯಕ್ಕೆ ದೂರವಾದುದಾಗಿದೆ ಎಂದು ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.
Also read: ಮಾರ್ಚ್ 5: ವಿಶ್ವ ಕ್ಯಾನ್ಸರ್ ಜಾಗೃತಿ ಮಾಹೆಯಾನದ ಅಂಗವಾಗಿ ಮ್ಯಾರಥಾನ್


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















