No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಸಿಕೆಯಿಂದ ಆಶಾದಾಯಕ ಜೀವನ ಸಾಧ್ಯ: ಸಚಿವ ಅಶ್ವತ್ಥನಾರಾಯಣ ವಿಶ್ಲೇಷಣೆ

kalpa News by kalpa News
October 22, 2021
in ಬೆಂಗಳೂರು ನಗರ
0
ಲಸಿಕೆಯಿಂದ ಆಶಾದಾಯಕ ಜೀವನ ಸಾಧ್ಯ:  ಸಚಿವ ಅಶ್ವತ್ಥನಾರಾಯಣ ವಿಶ್ಲೇಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯದಲ್ಲಿ ಶೇ.83 ಜನರಿಗೆ (4.15 ಕೋಟಿ ಜನರು) ಕೋವಿಡ್ ಮೊದಲನೇ ಲಸಿಕೆ ಕೊಡಲಾಗಿದೆ. 2.05 ಕೋಟಿ ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದು ರಾಜ್ಯದ ಸಹಕಾರ ಸಚಿವರಾದ ರಾಜ್ಯದ ಉನ್ನತ ಶಿಕ್ಷಣ, ಐಟಿ, ಬಿಟಿ & ಎಸ್‍ಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದರು.

ಮಲ್ಲೇಶ್ವರದ ಕಬಡ್ಡಿ ಮೈದಾನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಜೀವನ ಎಂದಿನಂತೆ ನಡೆಯಲು ಆರೋಗ್ಯ ಸಚಿವರು ಮತ್ತು ಸಚಿವಸಂಪುಟ ಶ್ರಮಿಸಿದೆ. ಆರ್ಥಿಕ ವಹಿವಾಟು ಕೋವಿಡ್‍ಪೂರ್ವ ಅವಧಿಗಿಂತ ಹೆಚ್ಚು ಉತ್ತಮವಾಗುವ ಹಂತ ತಲುಪಿದೆ. ಲಸಿಕೆಯಿಂದ ಆಶಾದಾಯಕ ಮತ್ತು ಭರವಸೆದಾಯಕ ಜೀವನ ಸಾಧ್ಯವಾಗಿದೆ ಎಂದು ವಿಶ್ಲೇಷಿಸಿದರು. ಲಸಿಕೆ ಮೂರನೇ ಡೋಸ್ ಕೊಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದರು.

ಕೋವಿಡ್ ನಿಯಂತ್ರಣ ಮತ್ತು ಜನರ ಜೀವನ ರಕ್ಷಣೆ ವಿಚಾರದಲ್ಲಿ ಲಸಿಕೆ ಮಹತ್ವದ ಪಾತ್ರ ವಹಿಸಿದೆ. ವೈದ್ಯರು, ವೈದ್ಯಕೀಯ ಸಿಬ್ಬಂದಿಯ ಶ್ರಮ ಹಾಗೂ ದೇಶದ ನಾಗರಿಕರ ಸಹಕಾರದಿಂದ 100 ಕೋಟಿ ಲಸಿಕೆ ಡೋಸ್ ಕೊಡಲು ಸಾಧ್ಯವಾಗಿದೆ. ಕೆಲವು ಮುಂದುವರಿದ ದೇಶಗಳಲ್ಲಿ ಶೇ 20ರಷ್ಟು ಲಸಿಕೆ ನೀಡುವ ಸಾಧನೆಯೂ ಆಗಿಲ್ಲ ಎಂದು ವಿಶ್ಲೇಷಿಸಿದರು.

ಜನರು ನರೇಂದ್ರ ಮೋದಿಯವರ ನಾಯಕತ್ವ ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆ ನಂಬಿಕೆ, ವಿಶ್ವಾಸ ಮತ್ತು ಭರವಸೆ ಹೊಂದಿರುವುದರ ಸಂಕೇತ ಇದಾಗಿದೆ. ಆತ್ಮ ನಿರ್ಭರ್ ಭಾರತ್ ಪರಿಕಲ್ಪನೆಯಡಿ ನಮ್ಮದೇ ಲಸಿಕೆಯನ್ನು ನಮ್ಮ ಜನರಿಗೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಅರ್ಹ 90 ಕೋಟಿ ಜನರ ಪೈಕಿ 70 ಕೋಟಿ ಜನರಿಗೆ ಈಗಾಗಲೇ ಮೊದಲನೇ ಲಸಿಕೆ ಕೊಡಲಾಗಿದೆ. ಸುಮಾರು 30 ಕೋಟಿ ಜನರಿಗೆ ಎರಡೂ ಲಸಿಕೆ ಕೊಡಲಾಗಿದೆ. 34,515 ಕೋಟಿ ರೂಪಾಯಿ ಒಟ್ಟು ವೆಚ್ಚವಾಗಿದೆ ಎಂದು ತಿಳಿಸಿದರು.

ದೀನದಲಿತರು, ವಂಚಿತರಿಗೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲ ಜನರಿಗೆ ಯಾವುದೇ ತಾರತಮ್ಯವಿಲ್ಲದೆ ಲಸಿಕೆ ಕೊಡಲಾಗಿದೆ. ಸಮಾನತೆಯ ಸಂದೇಶ ಈ ಮೂಲಕ ಕೊಟ್ಟಿದ್ದೇವೆ. ವೈದ್ಯರು, ನರ್ಸ್‍ಗಳು, ಅರೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಪ್ರಯತ್ನದಿಂದ ಇದು ಸಾಧ್ಯವಾಗಿದೆ ಎಂದರು.

2021ರ ಜನವರಿ 16ರಂದು ಪ್ರಧಾನಿಯವರು ಲಸಿಕೆ ಬಿಡುಗಡೆ ಮಾಡಿದರು, ಆರಂಭದಲ್ಲಿ ಆರೋಗ್ಯ ಕ್ಷೇತ್ರದ ಕಾರ್ಯಕರ್ತರಿಗೆ ಲಸಿಕೆ ಕೊಡಲಾಯಿತು. ನಂತರ ಮುಂಚೂಣಿ ಕಾರ್ಯಕರ್ತರು, ಮಾರ್ಚ್‍ನಲ್ಲಿ 60ರಿಂದ ಮೇಲ್ಪಟ್ಟ ವಯಸ್ಕರಿಗೆ, ಏಪ್ರಿಲ್‍ನಿಂದ 45 ವರ್ಷಕ್ಕೂ ಹೆಚ್ಚು ವಯಸ್ಸಿನವರಿಗೆ, ಮೂರನೇ ಹಂತದಲ್ಲಿ ಮೇ 2021ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಕೊಡಲಾಯಿತು ಎಂದರು.

ಜನವರಿ 2021ರಲ್ಲಿ 2.15 ಕೋಟಿ ಲಸಿಕೆ ನೀಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ 23.51 ಕೋಟಿ, ಅಕ್ಟೋಬರ್ ತಿಂಗಳ ಈವರೆಗೆ ಸುಮಾರು 26.61 ಕೋಟಿ ಲಸಿಕೆ ಕೊಡಲಾಗಿದೆ. ಮುಂದಿನ ತಿಂಗಳು ಇನ್ನೂ ಹೆಚ್ಚು ಲಸಿಕೆ ಕೊಡಲಾಗುವುದು. ಎಲ್ಲಿಯೂ ಲಸಿಕೆ ಕೊರತೆ ಇಲ್ಲ ಎಂದು ತಿಳಿಸಿದರು.

ಮಾಸ್ಕ್, ವೆಂಟಿಲೇಟರ್, ಆಮ್ಲಜನಕ, ಬೆಡ್‍ಗಳು ಸೇರಿದಂತೆ ಅನೇಕ ಸವಾಲುಗಳು ದೇಶದ ಮುಂದಿದ್ದವು. ಈ ಸವಾಲುಗಳಿಗೆ ಯಶಸ್ವಿಯಾಗಿ ದೇಶವು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪಂದಿಸಿದೆ. ಈಗ ಲಸಿಕೆಯನ್ನು ವಿಶ್ವದ ಇತರ ದೇಶಗಳಿಗೂ ಸರಬರಾಜು ಮಾಡಲಾಗುತ್ತಿದೆ ಎಂದರು.

ಇತರ ದೇಶಗಳಿಗೆ ಹೋಲಿಸಿದರೆ ವಿಶ್ವದಲ್ಲೇ ಕನಿಷ್ಠ ಸೋಂಕಿತರು, ಅತ್ಯಂತ ಕಡಿಮೆ ಸಾವಿನ ಪ್ರಮಾಣ ನಮ್ಮ ದೇಶದ್ದಾಗಿತ್ತು ಎಂದು ವಿವರಿಸಿದರು. ಭರವಸೆಯ ನಾಡು ನಮ್ಮದು, ಭಾರತ ಭರವಸೆಯ ದೇಶ ಎಂಬುದು ಇದರಿಂದ ಸಾಬೀತಾಗಿದೆ. ವಿಶ್ವಗುರುವಾಗುವತ್ತ ನಮ್ಮ ದೇಶ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಋಣಾತ್ಮಕ ಹೇಳಿಕೆ ನೀಡುವ ಮೂಲಕ ಏನು ತಿಳಿಸಲು ಹೊರಟಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಲಸಿಕೆ ಸಾಧನೆ ಬಗ್ಗೆ ವಿದೇಶಗಳ ನಾಯಕರೇ ಹೊಗಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಆರಂಭದ ದಿನಗಳಲ್ಲಿ ಲಸಿಕೆ ವಿರುದ್ಧ ಪ್ರಚಾರ ಮಾಡಿದ್ದರು ಎಂದು ನೆನಪಿಸಿದರು. ವಿಶ್ವವೇ ಬೆರಗಾಗುವ ಮಾದರಿಯಲ್ಲಿ 100 ಕೋಟಿ ಲಸಿಕೆ ನೀಡಿದ್ದು ಅಸಾಧಾರಣ ಸಾಧನೆ. ಅದನ್ನು ನಾವೀಗ ಆಚರಿಸುತ್ತಿದ್ದೇವೆ. ಸಿದ್ದರಾಮಯ್ಯ ಅವರು ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಮಳೆ ನಿಂತ ಕೂಡಲೇ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. 3 ಜನ ವೈದ್ಯರು ಮತ್ತು ಇಬ್ಬರು ಪೌರಕಾರ್ಮಿಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಎಂ. ಶಂಕರಪ್ಪ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಬಿ. ನಾರಾಯಣ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಜಿ. ಮಂಜುನಾಥ್ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಎನ್. ಆರ್. ರಮೇಶ್, ಮಾಜಿ ಕಾರ್ಪೋರೇಟರ್ ಹೇಮಲತಾ ಶೇಟ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Ashwath NarayanNews in KannadaNews KannadaState Newsಕೋವಿಡ್ ಲಸಿಕೆಬೆಂಗಳೂರುಸಚಿವ ಅಶ್ವತ್ಥನಾರಾಯಣ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವದಲ್ಲೇ ಅತ್ಯಂತ ವೇಗವಾದ ಭಾರತದ ಲಸಿಕಾ ಅಭಿಯಾನ : ಸಚಿವ ಸುಧಾಕರ್

Next Post

ಗಮನಿಸಿ! ಅ.23ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.23ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL