ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೊಸ ತೊಡಕು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದ ರೀತಿಯಲ್ಲಿ ಅವರವರ ಹಬ್ಬಗಳ ಆಚರಣೆಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಹಾಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಭಿತ್ತಿಪ್ರತ್ರ ಹಂಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಶಾಂತಿ ಸಭೆಗಳನ್ನು ನಡೆಸಿ ಶಾಂತಿಯುತವಾಗಿ ಹಬ್ಬ ಆಚರಿಸಲು ಉತ್ತಮ ವಾತಾವರಣ ನಿರ್ಮಿಸಲು ಸೂಚಿಸಲಾಗಿದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post