ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಸ್’ಎಸ್’ಎಲ್’ಸಿ ಪರೀಕ್ಷಾ ಫಲಿತಾಂಶ SSLC Result ಇಂದು ಪ್ರಕಟಗೊಂಡಿದ್ದು, ಇದರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 27ರಿಂದ ಜೂನ್ 4ರವರೆಗೂ ಪೂರಕ ಪರೀಕ್ಷೆ ನಡೆಯಲಿದೆ.
ಈ ಕುರಿತಂತೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, Minister B C Nagesh ಮೇ 27ರಿಂದ ಜೂನ್ ೪ರವರೆಗೂ ಪೂರಕ ಪರೀಕ್ಷೆ ನಡೆಯಲಿದೆ. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಆನ್’ಲೈನ್ ಮೂಲಕ ಪೂರಕ ಪರೀಕ್ಷೆಗೆ ರಿಜಿಸ್ಟರ್ ಮಾಡಿಕೊಳ್ಳಬೇಕು. ಮೇ 20ರಿಂದ 30ರವೆಗೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್’ಲೈನ್ ಹೊರತಾಗಿ ಬೇರೆ ಯಾವುದೇ ಮಾದರಿಯಲ್ಲಿ ಪೂರಕ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post