ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ 55 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ.
ಸೇವಾ ಸಿಂಧು ಪೋರ್ಟಲ್ (https://sevasindhugs.karnataka.gov.in) ಮೂಲಕ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ತಮ್ಮ ಗ್ರಾಹಕ ಐಡಿಯನ್ನು ವೆಬ್ ಪೋರ್ಟಲ್ ನಲ್ಲಿ ನಮೂದಿಸಬೇಕಾಗಿದ್ದು, ಜೊತೆಗೆ ಆಧಾರ್ ನಂಬರ್ ಹಾಗೂ ಮೊಬೈಲ್ ನಂಬರ್ ನ್ನು ದಾಖಲಿಸಬೇಕಾಗುತ್ತದೆ.
ಬೆಂಗಳೂರು ಒನ್ ಕೇಂದ್ರ, ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಮೊದಲ ದಿನವೇ ಗ್ರಾಹಕರಿಂದ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಭಾನುವಾರದ ಹೊರತಾಗಿಯೂ ಎಲ್ಲಾ ಎಸ್ಕಾಮ್ ಗಳ ಅಧಿಕಾರಿಗಳೂ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
Also read: ಶಕ್ತಿ ಯೋಜನೆ ಎಫೆಕ್ಟ್: ಬಟ್ಟೆ ಮೇಲೆ ಪ್ರಜ್ಞೆ ಇಲ್ಲದಂತೆ ಸೀಟಿಗಾಗಿ ಹೊಡೆದಾಡಿದ ಮಹಿಳೆಯರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post