ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಲ್ಲ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP)ಅಳವಡಿಸುವ ಅಂತಿಮ ದಿನಾಂಕ ಸೆ.15ರ ಭಾನುವಾರಕ್ಕೆ ಅಂತ್ಯವಾಗಿದ್ದರೂ, ಸೆ.18ರವರೆಗೂ ದಂಡ ವಿಧಿಸದಂತೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯು ಪೊಲೀಸರಿಗೆ ಸೂಚನೆ ನೀಡಿದ್ದು, ಸೆ.18ರವರೆಗೂ ಕಠಿಣ ಕ್ರಮ ಕೈಗೊಳ್ಳದಂತೆ ಹೇಳಿದೆ.
Also read: 8 ವಾಹನಗಳ ನಡುವೆ ಭೀಕರ ಅಪಘಾತ | 2 ಮಂದಿ ಸಾವು | ಹಲವರ ಸ್ಥಿತಿ ಗಂಭೀರ

ಸೋಮವಾರದಿಂದ ದಂಡ ವಿಧಿಸುವುದಾಗಿ ಕರ್ನಾಟಕ ಸಾರಿಗೆ ಇಲಾಖೆ ಘೋಷಣೆ ಮಾಡಿತ್ತು. ಕರ್ನಾಟಕ ಪೊಲೀಸ್ ಇಲಾಖೆ ಸಂಚಾರ ವಿಭಾಗ, ಸಾರಿಗೆ ಇಲಾಖೆಯವರೂ ಹಳೆ ನಂಬರ್ ಪ್ಲೇಟ್ ಇದ್ದ ವಾಹನದವರಿಗೆ ದಂಡವನ್ನು ವಿಧಿಸಲು ಆರಂಭಿಸಲಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post