ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2ನೇ ಬಾರಿಗೆ ಇಂದು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಕೊಡುಗೆ ನೀಡಿದ್ದು, ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸತತ ಬೆಂಬಲ ನೀಡಲಾಗುತ್ತಿದ್ದು, ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ಪರಿಹಾರಕ್ಕೆ 150 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ಹೇಳಿದರು.
ಬೆಂಗಳೂರು ಅಭಿವೃದ್ಧಿ ಯೋಜನೆಯ ಪಟ್ಟಿ ಹೀಗಿದೆ:
- ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪಿಸಲಾಗುವುದು.
- 10 ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳ ಅಭಿವೃದ್ಧಿ.
- ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
- ಹೈ ಡೆನ್ಸಿಟಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ.
- ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
Also read: ರಾಮನಗರ ಬೆಟ್ಟದಲ್ಲಿ ಭವ್ಯ ರಾಮಮಂದಿರಕ್ಕೆ ಅನುದಾನ: ಸಿಎಂ ಬೊಮ್ಮಾಯಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post