ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಓಮಿಕ್ರಾನ್ ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಬಂದರೆ ಶಾಲಾ ಕಾಲೇಜು ಬಂದ್ ಮಾಡಲು ನಾವು ಹಿಂಜರಿಯುವುದಿಲ್ಲ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೊರೋನಾ ಹಾಗೂ ಓಮಿಕ್ರಾನ್ ಪರಿಸ್ಥಿತಿಯ ಮೇಲೆ ಸತತವಾಗಿ ನಿವಾ ವಹಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ತಜ್ಞರ ಸಲಹೆಗಳ ಮೇರೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೆಲವು ವಸತಿ ಶಾಲೆಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇನ್ನು, ಸರ್ಕಾರಕ್ಕೆ ಮಕ್ಕಳ ಆರೋಗ್ಯವೇ ಮುಖ್ಯವಾಗಿದ್ದು, ಈ ವಿಚಾರದಲ್ಲಿ ನಾವು ರಾಜಿಯಾಗುವುದಿಲ್ಲ. ಅಂತಹ ಅಗತ್ಯ ಪರಿಸ್ಥಿತಿ ಎದುರಾದರೆ ಶಾಲಾ ಕಾಲೇಜುಗಳನ್ನು ಬಂದ್ ಮಾಡುತ್ತೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post