ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗಧಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು Minister Shriramulu ಎಚ್ಚರಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬಂದ ಹಿನ್ನಲೆಯಲ್ಲಿ ದರ ಹೆಚ್ಚು ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಅಧಿಕಾರಿಗಳ ಹತ್ತು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ರಾಜ್ಯಾದ್ಯಂತ ಈ ತಂಡ ತಪಾಸಣೆ ಕಾರ್ಯಚರಣೆ ನಡೆಸಲಿದೆ.ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀ ಆಗುವುದಿಲ್ಲಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲೇ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಬೇಕಾಬಿಟ್ಟಿ ವಸೂಲಿಗೆ ಕಡಿವಾಣ ಹಾಕಲು ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದು ರಾಮುಲು ಟ್ವಿಟರ್‍ನಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗಸೂಚಿಯಂತೆ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆ ಕುರಿತು ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಆಯಾ ರೂಟ್‍ಗಳಲ್ಲಿ ನಿಗದಿತ ದರವನ್ನಷ್ಟೇ ಪಡೆಯಬೇಕು ಎಂದು ಸೂಚನೆ ನೀಡಿದ್ದಾರೆ.

ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೆ, ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗದಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಸಚಿವ ರಾಮುಲು ಅವರು
ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




























Discussion about this post