ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ #BESCOM ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ.
ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Also read: ದೇಶದ 2,249 ರೈಲು ನಿಲ್ದಾಣ, ಸೇವಾ ಕಟ್ಟಡಗಳಲ್ಲಿ ಸೌರ ಘಟಕ | ರೈಲ್ವೆ ಸೌರೀಕರಣ ಪ್ರಗತಿ
ವಾಟ್ಸ್ ಪ್ ಸಹಾಯವಾಣಿ ವಿವರ
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಬರುವ ವಿದ್ಯುತ್ ಸಂಬಂಧಿತ ದೂರುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದ್ದು, ಕರೆಗಳ ಒತ್ತಡದಿಂದಾಗಿ 1912 ಸಂಪರ್ಕ ಸಾಧ್ಯವಾಗುವುದಿಲ್ಲ. ಹೀಗಾಗಿ ಗ್ರಾಹಕರು ವಾಟ್ಸ್‌ಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post