ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ತುರ್ತು ಆಮ್ಲಜನಕ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡತ್ತಿದ್ದ ಇಬ್ಬರನ್ನು ಬಂಧಿಸಿ 4 ಆಮ್ಲಜನಕ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಶೇಷಾದ್ರಿಪುರ ನಿವಾಸಿ ಶಿವಗಣೇಶ್ ಆಲಿಯಾಸ್ ನದೇಶನ್ (49), ಬ್ಯಾಟರಾಯನಪುರ ಗ್ಯಾಸ್ ಏಜೆನ್ಸಿಯ ಭರತ್ ಬಂಧಿತ ಆರೋಪಿಗಳಾಗಿದ್ದು, ಇವರು ತುರ್ತು ಅಗತ್ಯವಿರುವ ಆಮ್ಲಜನಕ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಗೆ ಸರಬರಾಜು ಮಾಡಿ ಸಂಕಷ್ಟದಲ್ಲಿರುವವರಿಗೆ ಪರೋಕ್ಷವಾಗಿ ಸುಲಿಗೆ ಮಾಡುತ್ತಿದ್ದರು. ಬಂಧಿತರ ವಿರುದ್ಧ ಶೇಷಾದ್ರಿಪುರ ಮತ್ತು ಬ್ಯಾಟರಾಯನಗರ ಠಾಣೆಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post