No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡ ಭಾಷೆಯ ಅಸ್ಮಿತೆ ಕಾಪಾಡಲು ಅಗತ್ಯವಾದ ಎಲ್ಲಾ ಯೋಜನೆ ಅನುಷ್ಠಾನ: ಸಚಿವ ಶಿವರಾಜ್ ಎಸ್. ತಂಗಡಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 2, 2023
in ಬೆಂಗಳೂರು ನಗರ
0
ಕನ್ನಡ ಭಾಷೆಯ ಅಸ್ಮಿತೆ ಕಾಪಾಡಲು ಅಗತ್ಯವಾದ ಎಲ್ಲಾ ಯೋಜನೆ ಅನುಷ್ಠಾನ: ಸಚಿವ ಶಿವರಾಜ್ ಎಸ್. ತಂಗಡಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕನ್ನಡ ಭಾಷೆಯ ಅಸ್ಮಿತೆಯನ್ನು ಕಾಪಾಡಲು ಹಾಗೂ ಕನ್ನಡ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ.

ಅವರು ಇಂದು ಕನ್ನಡ ಭವನದಲ್ಲಿರುವ ಅಂತರಂಗ ಸಭಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರ ವ್ಯಾಪ್ತಿಗೆ ಬರುವ ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ವಿಧಾನಮಂಡಲದಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಬೇಕೆಂದು ಸೂಚಿಸಿದರು.
ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಆಯೋಜಿಸುತ್ತಿರುವ ವಿವಿಧ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಆಯೋಜಿಸಲು ರೂಪುರೇಷೆ ಸಿದ್ಧಪಡಿಸಬೇಕೆಂದು ಹೇಳಿದರು. ಪ್ರತೀ ಜಿಲ್ಲೆಯ ಜೀವಂತಿಕೆ ಉಳಿಸುವಂತಹ ಕಾರ್ಯಕ್ರಮವಾಗಬೇಕು. ಅದಕ್ಕೆ ಪೂರಕವಾಗಿ ಪ್ರವಾಸೋದ್ಯಮ ಇಲಾಖೆಯ ಸಹಯೋಗವನ್ನು ಪಡೆಯುವುದರ ಮೂಲಕ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಹೆಚ್ಚಿಸಬಹುದೆಂದು ಸಲಹೆ ನೀಡಿದರು.

ಖಾಸಗೀ ಸಂಸ್ಥೆಗಳಲ್ಲಿ ಹಾಗೂ ಖಾಸಗೀ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸುವುದರ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಇಲಾಖೆಗಳು ಪರಿಶೀಲನೆ ನಡೆಸಬೇಕು. ಕನ್ನಡಿಗರಿಗೆ ಉದ್ಯೋಗವಕಾಶವನ್ನು ದೊರಕಿಸಬೇಕಾದ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಚ್ಚು ಶ್ರಮ ವಹಿಸಬೇಕು. ಅದಕ್ಕೆ ಸರ್ಕಾರದಿಂದ ಬೇಕಾದ ಕಾನೂನಾತ್ಮಕ ನೆರವನ್ನು ಒದಗಿಸಲು ಶೀಘ್ರದಲ್ಲಿ ಸಂಬಂಧಪಟ್ಟವರ ಸಭೆ ಕರೆಯಲಾಗುವುದೆಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲು ಕ್ರಮವಹಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡಬೇಕಿದೆ. ಇಲಾಖೆಯ ಎಲ್ಲ ಯೋಜನೆಗಳನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರಮಹತ್ವದ್ದು, ಇದರಲ್ಲಿ ಯಾವುದೇ ಲೋಪವಾದರೂ ಅದನ್ನು ತಾವು ಸಹಿಸುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದರು.

Also read: ಮಾಧ್ಯಮದವರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಜವಾಬ್ಧಾರಿ: ಕೆ.ವಿ. ಪ್ರಭಾಕರ್ ಭರವಸೆ

ಹಾರ ತುರಾಯಿ ಬದಲು ಪುಸ್ತಕ ನೀಡಿ ತಮ್ಮನ್ನು ಭೇಟಿ ಮಾಡಲು ಬರುವ ಯಾರೇ ಆದರೂ ಹಾರ ತುರಾಯಿ, ಶಾಲು, ಪೇಟ ಇತ್ಯಾದಿಗಳಿಂದ ಸನ್ಮಾನ ಮಾಡುವುದನ್ನು ನಾನು ಬಯಸುವುದಿಲ್ಲ .ಅದರ ಬದಲಾಗಿ ಒಂದು ಒಳ್ಳೆಯ ಸಾಹಿತ್ಯ ಕೃತಿಯನ್ನು ಕೊಟ್ಟರೆ ಅದು ನನಗೆ ನೀಡಬಹುದಾದ ಉತ್ತಮ ಕೊಡುಗೆಯಾಗುತ್ತದೆ . ಇದರಿಂದ ಪುಸ್ತಕ ಪ್ರಕಾಶಕರಿಗೆ, ಮಾರಾಟಗಾರರಿಗೆ ಹಾಗೂ ಸಾಹಿತಿಗಳಿಗೆ ನೆರವಾಗುವುದಲ್ಲದೆ ಪುಸ್ತಕಕೋದ್ಯಮದ ಬೆಳವಣಿಗೆಗೂ ಅನುಕೂಲವಾಗುತ್ತದೆ. ಈ ರೀತಿ ನನಗೆ ನೀಡಲಾಗುವ ಎಲ್ಲಾ ಪುಸ್ತಕಗಳನ್ನು ಸಂಗ್ರಹಿಸಿ ಓದುವ ಆಸಕ್ತಿ ಉಳ್ಳ ಮಕ್ಕಳಿಗೆ ಅದನ್ನು ನೀಡಲು ಬಯಸುತ್ತೇನೆ .ಅಥವಾ ಆಸಕ್ತ ಶಾಲಾ, ಕಾಲೇಜಿನ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡುತ್ತೇನೆ ಎಂದು ಸಚಿವರು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳಾ, ಎಲಾಖೆಯ ನಿರ್ದೇಶಕರಾದ ವಿಶ್ವನಾಥ ಪಿ. ಹಿರೇಮಠ ಸೇರಿದಂತೆ ವಿವಿಧ ಪ್ರಾಧಿಕಾರಗಳ ಹಾಗೂ ಅಕಾಡೆಮಿಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share201Tweet123Send
Previous Post

ಮಾಧ್ಯಮದವರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಜವಾಬ್ಧಾರಿ: ಕೆ.ವಿ. ಪ್ರಭಾಕರ್ ಭರವಸೆ

Next Post

2024ರ ಏಪ್ರಿಲ್ ಹೊತ್ತಿಗೆ ಐಫೋನ್ ಉತ್ಪಾದನೆ ಆರಂಭ: ಸಚಿವ ಎಂ.ಬಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
2024ರ ಏಪ್ರಿಲ್ ಹೊತ್ತಿಗೆ ಐಫೋನ್ ಉತ್ಪಾದನೆ ಆರಂಭ: ಸಚಿವ ಎಂ.ಬಿ. ಪಾಟೀಲ್

2024ರ ಏಪ್ರಿಲ್ ಹೊತ್ತಿಗೆ ಐಫೋನ್ ಉತ್ಪಾದನೆ ಆರಂಭ: ಸಚಿವ ಎಂ.ಬಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL