ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ ಜುಲೈ 17 ಅಥವಾ 19ರಿಂದ ಜಾರಿಗಳಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಿದವರಿಗೆ ಮಾತ್ರ 2000 ರೂ. ದೊರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Minister Lakshmi Hebbalkar ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಯೋಜನೆ ಉದ್ಘಾಟನೆಗೆ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆಯಲಾಗಿದೆ. ಅವರು ಸಮಯ ನೀಡಿದರೆ ಜುಲೈ 17 ಸೋಮವಾರ ಸಂಜೆ ಬ್ಯಾಂಕ್ವೆಟ್ ಹಾಲ್’ನಲ್ಲಿ ಉದ್ಘಾಟಿಸಲಾಗುವುದು. ರಾಷ್ಟ್ರೀಯ ನಾಯಕರು ಬರದಿದ್ದಲ್ಲಿ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಾರೆ ಎಂದರು.
ಅರ್ಜಿ ಸಲ್ಲಿಸಿದವರಿಗೆ ಮಾತ್ರ ಯೋಜನೆ
ಇನ್ನು, ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 19ರಿಂದ ಅವಕಾಶವಿದೆ. ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಗೃಹ ಜ್ಯೋತಿ ಯೋಜನೆಯಂತೆ ಈ ಯೋಜನೆಗೆ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸಲಾಗುವುದು.
ಕೊನೆಯ ದಿನಾಂಕ ಎಂದು?
ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಕೆಗೆ ಯಾವುದೇ ರೀತಿಯ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post