ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅರಣ್ಯ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಚೋರೇಜ್ ಯೋಜನೆ #Sharavathi Pumped Storage Project ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ #K J George ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ #Eshwar Khandre ಅವರ ನೇತೃತ್ವದಲ್ಲಿ ಎರಡೂ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಾಯಿತು.
ಹಾಲಿ ಶರಾವತಿ ಜಲ ವಿದ್ಯುತ್ ಯೋಜನೆ ವ್ಯಾಪ್ತಿಯ ಕಾರಿಡಾರ್ ನಲ್ಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೂಡ ಬರುತ್ತಿರುವುದರಿಂದ ಅರಣ್ಯ ಹಾನಿಯ ಕನಿಷ್ಠ ಪ್ರಮಾಣದಲ್ಲಿರುತ್ತದೆ ಎಂದು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಇಂಧನ ಇಲಾಖೆ ಅಧಿಕಾರಿಗಳು ಅರಣ್ಯ ಸಚಿವರಿಗೆ ಮಾಹಿತಿ ನೀಡಿದರು. ಇದನ್ನು ಪರಿಗಣಿಸಿದ ಸಚಿವರು, ಕೇಂದ್ರದಿಂದ ಸೂಕ್ತ ಅನುಮತಿಗಳಿಗಾಗಿ ಒಂದು ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Also read: The Sharavathi Pumped Storage Project to be Executed with Minimal Environmental Impact: George

ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ, ಸಂಬಂಧಿಸಿದ ಜಿಲ್ಲಾ ಅರಣ್ಯಾಧಿಕಾರಿಗಳಿಗೂ ಸೂಕ್ತ ಸಲಹೆಗಳನ್ನು ನೀಡಿ ವರದಿ ಕಳುಹಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post