ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ತನಿಖೆ ಮುಕ್ತಾಯಗೊಂಡಿದ್ದು, ಒಂದೆರಡು ದಿನದಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಅಂದರೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.
ಈ ಕುರಿತಂತೆ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸಂಪೂರ್ಣ ಮುಕ್ತಾಯಗೊಂಡಿದ್ದು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರೊಂದಿಗೆ ಚರ್ಚೆ ಮಾಡಲಾಗಿದೆ. ವರದಿಯಲ್ಲಿ ಕೆಲವೊಂದು ವಿಚಾರಗಳನ್ನು ಬಗ್ಗೆ ಅವರು ಉಲ್ಲೇಖಿಸಿದ್ದು, ಅದರ ಮೇಲೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಬಹುತೇಕ ಒಂದೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದರು.
ಸಾಕ್ಷಿ ಕುರಿತು ಏನೆಂದರು?
ಪ್ರಕರಣ ಕುರಿತಂತೆ ಬಹಳಷ್ಟು ಸಾಕ್ಷಿಗಳು ನಮಗೆ ತನಿಖೆ ವೇಳೆ ದೊರೆತಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಎಲ್ಲವನ್ನೂ ನ್ಯಾಯಾಲಯಕ್ಕೆ ಒಪ್ಪಿಸುತ್ತೇವೆ. ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ ನಂತರ ತಿಳಿಯುತ್ತದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್’ಎಸ್’ಎಸ್’ಎಲ್ ವರದಿ ಬಂದಿದ್ದು, ಸಾಕ್ಷಿಗಳು ದೊರೆತಿವೆ. ಅಲ್ಲದೇ, ಪ್ರಕರಣಕ್ಕೆ ಪೂರಕ ವರದಿ ಹೈದರಾಬಾದ್ ಸಿಎಸ್’ಎಫ್’ನಿಂದ ಬಂದಿದ್ದು, ಇನ್ನೂ ಕೆಲವು ವರದಿ ಅಲ್ಲಿಂದ ಬರಬೇಕಿದೆ. ಏನೇ ಆದರೂ ಚಾರ್ಜ್ ಶೀಟ್ ಹಾಕುತ್ತೇವೆ. ಹೈದರಾಬಾದ್’ನಿಂದ ಪೂರ್ಣ ವರದಿ ಬಂದ ನಂತರ ಮತ್ತೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post