ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Minister Lakshmi Hebbalkar ತಿಳಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ Gruhalakshmi Scheme ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.

Also read: Distribution of millet malt for mental and physical health of 55 lakh government school children
ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿನಂತಿಸಿಕೊಂಡರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post