No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾನೂನು ಸುವ್ಯವಸ್ಥೆಯ ಜೊತೆಗೆ ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 6, 2021
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ ನಿಷ್ಠುರವಾಗಿದ್ದು, ಈ ಪರಂಪರೆಯನ್ನು ಮುಂದುವರೆಸಬೇಕು. ಆಗ ಮಾತ್ರ ಜನಸಾಮಾನ್ಯರಿಗೆ ಸುರಕ್ಷತೆ ಹಾಗೂ ಆತ್ಮಸ್ಥೈರ್ಯ ನೀಡಲು ಸಾಧ್ಯ. ಕಾನೂನು ಸುವ್ಯವಸ್ಥೆಯ ಜೊತೆಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಸೇವೆ ಮಾಡಲು ಪೊಲೀಸರಿಗೆ ಅಧಿಕಾರವನ್ನು ನೀಡಲಾಗಿದೆ. ಈ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡುವ ಗುರುತರ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಬಹಳ ವರ್ಷಗಳ ನಂತರ ಮೊದಲ ಬಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ವಿಧಿವಿಜ್ಞಾನ ಪ್ರಯೋಗಾಲಯಗಳು, ನೇಮಕಾತಿ ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಅಪರಾಧಿಗಳೊಂದಿಗೆ ಪೊಲೀಸರು ಶಾಮೀಲಾಗಬಾರದು, ನಗರ ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್ ದಂಧೆಯಲ್ಲಿ ಪೊಲೀಸರು ಕೈಜೋಡಿಸದೇ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.


ಜನಸಾಮಾನ್ಯರೊಂದಿಗೆ ಹಾಗೂ ತಮ್ಮ ಅಧೀನದಲ್ಲಿ ಕೆಲಸ ಮಾಡುವ ಪೇದೆಗಳನ್ನೂ ಸಹ ಗೌರವದಿಂದ ನಡೆಸಿಕೊಳ್ಳಬೇಕು. ಅವರೊಂದಿಗೆ ವ್ಯವಹರಿಸುವಾಗ ಭಾಷೆ ನಿಯಂತ್ರಣದಲ್ಲಿರಲಿ ಎಂದು ಸಲಹೆ ನೀಡಿದರು.

ಇಲಾಖೆಯ ಎಲ್ಲ ಹಂತಗಳಲ್ಲಿಯೂ ವರದಿ ಮಾಡುವ ವ್ಯವಸ್ಥೆ ಉತ್ತಮವಾಗಿರಬೇಕು. ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಹಿರಿಯ ಅಧಿಕಾರಿಗಳು ಸುದೀರ್ಘವಾಗಿ ಪರಿಶೀಲಿಸಬೇಕು. ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿ ಅಪರಾಧಿಗಳಲ್ಲಿ ಭಯವುಂಟು ಮಾಡಬೇಕು. ಇಲಾಖೆಯ ಆಂತರಿಕ ಭದ್ರತಾ ವಿಭಾಗವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತನ್ನ ಬಾಹುಗಳನ್ನು ಇನ್ನಷ್ಟು ವಿಸ್ತರಿಸಬೇಕಿದೆ ಎಂದರು.


ಡ್ಯಾಶ್ ಬೋರ್ಡ್ :
ಪೊಲೀಸ್ ಮಹಾ ನಿರ್ದೇಶಕರಿಂದ ಹಿಡಿದು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮದೇ ಡ್ಯಾಶ್ ಬೋರ್ಡ್ ಗಳನ್ನು ಹೊಂದಿರಬೇಕು. ಎಲ್ಲ ಮಾದರಿಯ ಅಪರಾಧಗಳ ಪಟ್ಟಿ ಪತ್ತೆಯಾಗಿರುವ ಪ್ರಕರಣಗಳು, ದಸ್ತಗಿರಿ ಆಗಿರುವ ಸಂಖ್ಯೆ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವ ವ್ಯವಸ್ಥೆಯನ್ನು ಡ್ಯಾಶ್ ಬೋರ್ಡ್ ಮೂಲಕ ಮಾಹಿತಿ ಲಭ್ಯವಿರಬೇಕು.

ಇಲಾಖೆಯ ಆಧುನೀಕರಣ :
ಆರ್ಥಿಕ ಮತ್ತು ಸೈಬರ್ ಕ್ರೈಂ ನಿಯಂತ್ರಣಕ್ಕೆ ಪ್ರತ್ಯೇಕ ತಾಂತ್ರಿಕ ವಿಭಾಗವನ್ನು ರಚಿಸುವಂತೆ ಸೂಚಿಸಿದರು. ಐಎಸ್ ಡಿಯ ಬಲವರ್ಧನೆ, ಕರಾವಳಿಯಲ್ಲಿ ನಿಗಾ ವಹಿಸಲು ಹೈಸ್ಪೀಡ್ ಬೋಟುಗಳ ಖರೀದಿ, ಮಧ್ಯಮ ಮಟ್ಟದ ಅಧಿಕಾರಿಗಳಿಗೆ ಎನ್ ಡಿ ಎ ಮಟ್ಟದ ತರಬೇತಿ ಕೇಂದ್ರ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬಂಧೀಖಾನೆ, ಅಗ್ನಿಶಾಮಕ ದಳದ ಸುಧಾರಣೆಯಾಗಬೇಕಲ್ಲದೆ ಗುಪ್ತಚರ ವಿಭಾಗ ಮತ್ತು ಸಿಓಡಿ ವಿಭಾಗದ ಪುನರ್ ರಚನೆ ಹಾಗೂ ತಾಂತ್ರಿಕವಾಗಿ ಮೇಲ್ದರ್ಜೆಗೇರಿಸುವುದು ಅಗತ್ಯವಿದೆ ಎಂದರು.

ಡ್ರಗ್ಸ್ ಮಾಫಿಯಾ :
ಕಳೆದ ಎರಡು ವರ್ಷಗಳಲ್ಲಿ ಮಾದಕ ವಸ್ತು ಮಾಫಿಯಾವನ್ನು ನಿಯಂತ್ರಣಕ್ಕೆ ತರಲಾಗಿದೆ. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂದೆಂದೂ ಡ್ರಗ್ಸ್ ಪತ್ತೆಯಾಗಿರಲಿಲ್ಲ. ಇದನ್ನು ಮುಂದುವರೆಸಬೇಕು. ಕ್ಲಬ್ ಗಳಲ್ಲಿ ಜೂಜಾಟ, ಜಿಲ್ಲೆಗಳಲ್ಲಿ ಮರಳು ಮಾಫಿಯಾವನ್ನು ಪೊಲೀಸರು ನಿಗ್ರಹಿಸಬೇಕು. ಈ ಬಗ್ಗೆ ಸರ್ಕಾರ ಝೀರೋ ಟಾಲರೆನ್ಸ್ ಇರುವುದಾಗಿ ಈ ಹಿಂದೆಯೇ ಸ್ಪಷ್ಟಪಡಿಸಲಾಗಿದೆ.

ಅಪರಾಧ ನಿಯಂತ್ರಣ ಮತ್ತು ಸಾಮಾಜಿಕ – ಕಾನೂನು ವ್ಯವಸ್ಥೆಗೆ ನೇರ ಸಂಪರ್ಕವಿದ್ದು , ಅಪರಾಧಗಳನ್ನು ನಿಯಂತ್ರಿಸಿದಾಗ ಮಾತ್ರ ಕಾನೂನು ವ್ಯವಸ್ಥೆ ಸುಸ್ಥಿತಿಗೆ ಬರುತ್ತದೆ. ಪೊಲೀಸ್ ಇಲಾಖೆಯಲ್ಲಿ ವ್ಯವಸ್ಥೆಯ ಸುಧಾರಣೆಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೇಶ ವಿದ್ರೋಹಿ ಚಟುವಟಿಕೆಗಳ ನಿಗ್ರಹ, ಜಿಲ್ಲಾ ಮಟ್ಟದಲ್ಲಿ ಅಪರಾಧಗಳ ಸಭೆ ನಡೆಸಬೇಕು, ಪೊಲೀಸ್ ಇಲಾಖೆ ಸರ್ಕಾರಕ್ಕೆ ಗೌರವ ತರುವಂತೆ ನಡೆದುಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಕಾಫಿ ಟೀಬಲ್ ಬುಕ್, ಸೇವೆಯಲ್ಲಿದ್ದಾಗ ಮರಣ ಹೊಂದಿದ ಇಲಾಖೆಯ ನೌಕರರಿಗೆ ಒದಗಿಸಿರುವ ಪರಿಹಾರದ ಕುರಿತ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದರು. ಹಾಗೂ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ (ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್) ಚಾಲನೆ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiDrug MaffiyaHome Minister Araga GnanendraKannada NewsKannada News LiveKannada News OnlineKannada News WebsiteKannada WebsiteKarnataka State GovernmentLatest News KannadaNews in KannadaNews KannadaState Newsಗೃಹ ಸಚಿವ ಆರಗ ಜ್ಞಾನೇಂದ್ರಡ್ರಗ್ಸ್ ಮಾಫಿಯಾ :‌ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಾಜ್ಯ ಪೊಲೀಸ್ ಇಲಾಖೆ
Share199Tweet123Send
Previous Post

ಭರದಿಂದ ಸಾಗಿದ ಬ್ಯಾಂಕ್‌ಲೋನ್ ಸಿನಿಮಾ ಚಿತ್ರೀಕರಣ… 

Next Post

ಸಾವಯವ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರ ಆತ್ಮಹತ್ಯೆ ತಡೆ ಸಾಧ್ಯ: ಜಗದೀಶ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾವಯವ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರ ಆತ್ಮಹತ್ಯೆ ತಡೆ ಸಾಧ್ಯ: ಜಗದೀಶ್ ಅಭಿಮತ

ಸಾವಯವ ಕೃಷಿ ಪದ್ಧತಿ ಅಳವಡಿಕೆಯಿಂದ ರೈತರ ಆತ್ಮಹತ್ಯೆ ತಡೆ ಸಾಧ್ಯ: ಜಗದೀಶ್ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL