ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರ ಪರಿಣಾಮವಾಗಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವ ಪರಿಣಾಮ ತೇವಾಂಶಭರಿತ ಮೋಡಗಳು ಸೃಷ್ಟಿಯಾಗಲಿವೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಅಂದರೆ ಎ.9ರಿಂದ 13ರವರೆಗೂ ಗುಡುಗು-ಮಿಂಚು ಸಹಿತ ಕೊಂಚ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post