ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ #Temple Priest ನೀಡಲಾಗುತ್ತಿರುವ ತಸ್ತಿಕ್ ಮೊತ್ತವನ್ನು ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ.
ಬಜೆಟ್ #Budget ಭಾಷಣದಲ್ಲಿ ಮಾತನಾಡಿರುವ ಅವರು, ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು ಎಂದಿದ್ದಾರೆ.
Also read: ಮುಸ್ಲಿಮರಿಗೆ ರಾಜ್ಯ ಸರ್ಕಾರ ಬಂಪರ್ | ಕೈಗಾರಿಕೆ ಜಾಗ ಹಂಚಿಕೆ, ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ
ಅಲ್ಲದೇ, ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















