ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಪ್ರತಿನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಳಿಗ್ಗೆ 9:30ಕ್ಕೆ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ @BSYBJP ರವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಆರೋಗ್ಯ ಸಚಿವ @mla_sudhakar, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/XpNPmzQG1j
— CM of Karnataka (@CMofKarnataka) April 16, 2021
ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸೇರಿದಂತೆ ವೈದ್ಯರು, ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣ ಕುರಿತಾಗಿ ತಜ್ಞರ ಸಮಿತಿ ನೀಡಿರುವ ವರದಿಯನ್ನಾಧರಿಸಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಹೊಸದಾಗಿ 14,738 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 3,591 ಜನ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ವಾಪಸ್ಸಾಗಿದ್ದು, ಒಟ್ಟು ಈವರೆಗೆ 9,99,958 ಜನರು ಗುಣಮುಖರಾಗಿದ್ದಾರೆ. ಸದ್ಯ 92,561 ಜನರು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬೆಂಗಳೂರಿನಲ್ಲಿ 10,497 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟು ಈವರೆಗೆ 5,12,521 ಪ್ರಕರಣಗಳು ದೃಢಪಟ್ಟಿವೆ. 1,807 ಜನರು ಆಸ್ಪತ್ರೆಯಿಂದ ವಾಪಸ್ಸಾಗಿದ್ದು ಈವರೆಗೆ 4,35,730 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 71,827 ಜನರು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post