ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್1 ಮಿಷನ್ Aditya L1 Mission ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ಭಾರತದ ಹಿರಿಮೆಯನ್ನು ಸೂರ್ಯನ ಎತ್ತರಕ್ಕೆ ಏರಿಸಿದೆ.
ಚಂದ್ರಯಾನ-3 Chandrayaana-3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ಇದೀಗ ಸೂರ್ಯನ ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ-ಸಿ57 ರಾಕೆಟ್ ನಭಕ್ಕೆ ಹಾರಿತು.
ಇನ್ನು 126 ದಿನಗಳ ಪ್ರಯಾಣದ ಬಳಿಕ ಆದಿತ್ಯ ಎಲ್1 ನೌಕೆ ತನ್ನ ನಿಗದಿತ ಗಮ್ಯಸ್ಥಾನವಾದ ಭೂಮಿ ಹಾಗೂ ಸೂರ್ಯನ ನಡುವಿನ ಎಲ್1 ಅನ್ನು ತಲುಪಲಿದೆ. ಅದಕ್ಕೂ ಮುನ್ನ ಆದಿತ್ಯ ಎಲ್1 ಭೂಮಿಯ ಸುತ್ತ 16 ದಿನಗಳ ಕಾಲ ಸಂಚರಿಸಲಿದ್ದು, 5 ಕಕ್ಷೆ ಏರಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದೆ. ಆದಿತ್ಯ ಎಲ್1 ಮಿಷನ್ ಆರಂಭಿಸುವುದರೊಂದಿಗೆ ಸೂರ್ಯನ ಅಧ್ಯಯನಕ್ಕಾಗಿ ನೌಕೆಯನ್ನು ಕಳಿಸಿಕೊಟ್ಟ ಐದನೇ ದೇಶ ಹಾಗೂ 6ನೇ ಬಾಹ್ಯಾಕಾಶ ಸಂಸ್ಥೆ ಭಾರತವಾಗಿದೆ. ಇದಕ್ಕೂ ಮುನ್ನ ಅಮೆರಿಕ, ಜರ್ಮನಿ, ರಷ್ಯಾ ಹಾಗೂ ಚೀನಾ ದೇಶಗಳು ನೌಕೆಯನ್ನು ಕಳಿಸಿದ್ದವು. ಯುರೋಪಿಯನ್ ಸ್ಪೇಸ್ ಏಜೆನ್ಸಿ ಕೂಡ ತನ್ನ ನೌಕೆಯನ್ನು ಕಳಿಸಿದೆ.
ಸೂರ್ಯ ಭೂಮಿಯಿಂದ 15 ಕೋಟಿ ಕಿ.ಮೀ.ಗಳಷ್ಟು ದೂರದ್ದು, ಸೂರ್ಯನ ವಯಸ್ಸು 4.5 ಬಿಲಿಯನ್ ವರ್ಷಗಳು. ಹೈಡ್ರೋಜನ್ & ಹೀಲಿಯಂ ಗ್ಯಾಸ್‌ನ ಕೆಂಡದುಂಡೆ ಸೂರ್ಯ. ಮೇಲ್ಮೈನಲ್ಲಿ 5,500 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ಮಧ್ಯಭಾಗ ಕೋರ್‌ನಲ್ಲಿ ಊಹಿಸಲಾಗದಷ್ಟು ಶಾಖವಿದೆ. 1.5ಕೋಟಿ ಡಿಗ್ರಿ ಸೆಲ್ಸಿಯಸ್‌ನ ಗರಿಷ್ಠ ತಾಪಮಾನವಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post