ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಾಕಿಸ್ತಾನಕ್ಕೆ ರಹಸ್ಯವಾಗಿ ಭಾರತದ ಮಿಲಿಟರಿ #Indiay Army ಮಾಹಿತಿಗಳನ್ನು ರವಾನೆ ಮಾಡುತ್ತಿದ್ದ ಆರೋಪದ ಮೇರೆಗೆ ಶಂಕಿತ ಪಾಕಿಸ್ತಾನ ಏಜೆಂಟ್ ನನ್ನು #Pakistan Agent ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ.
ಬೆಂಗಳೂರಿನ ಬಿಇಎಲ್ನಲ್ಲಿ #BEL ಪಿಐಡಿಸಿ ಆಗಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಬಂಧಿತ ಆರೋಪಿ. ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದವನು ಎನ್ನಲಾದ ಈತ ಬಿಇಎಲ್ನಲ್ಲಿನ ಮಹತ್ವದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ, ಮಿಲಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ.
Also read: ಒಗ್ಗಟ್ಟಿನಿಂದ ಕೆಲಸ ಕೈಗೊಂಡಲ್ಲಿ ಅಧಿಕ ಫಲ ಶ್ರುತಿ ಸಾಧ್ಯ: ಕಾಡಾ ಅಧ್ಯಕ್ಷ ಅಂಶುಮಂತ್
ಆತನ ವಿಚಾರಣೆ ನಡೆಸಿದ ಮಿಲಟರಿ ಇಂಟಲಿಜೆನ್ಸ್ ಎದುರು ಇದೀಗ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದ್ದು, ದೀಪ್ ರಾಜ್ ಚಂದ್ರ ಕಳೆದ ಮೂರು ವರ್ಷಗಳಿಂದ ಪಾಕಿಸ್ತಾನದ ಐಎಸ್ಐ ಸಂಸ್ಥೆಯ ಮಹಿಳಾ ಗೂಢಚಾರಳ ಸಂಪರ್ಕದಲ್ಲಿದ್ದ . ಈ ಅವಧಿಯಲ್ಲಿ ಆರೋಪಿಯ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆ ಆಗಿರುವ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ಹೇಳಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post