No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶ್ವೇತಪತ್ರ ಹೊರಡಿಸಿ: ಸಿದ್ಧರಾಮಯ್ಯ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2021
in ಬೆಂಗಳೂರು ನಗರ
0
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು : ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ತಮ್ಮ ನಿವಾಸದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು ಎಂದರು.

ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರ್ಕಾರ ಈ ವರೆಗೆ ಪಾಲಿಸಿಲ್ಲ. ಶ್ವೇತಪತ್ರದ ವಿಚಾರದಲ್ಲಿಯಾದರೂ ನ್ಯಾಯಾಲಯದ ಆದೇಶಕ್ಕೆ ಮನ್ನಣೆ ನೀಡಲಿ ಎಂದು ಹೇಳಿದರು.

ಲಾಕ್‍ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬಗಳು ಹಾಗೂ ದುಡಿಯುವ ವರ್ಗದವರಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದೆ. ಆದರೆ ಸರ್ಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಳೆದ ವರ್ಷ ಇದೇ ರೀತಿ ಪ್ಯಾಕೇಜ್ ಘೋಷಣೆ ಮಾಡಿತ್ತು. ಆದರೆ, ಬಹುತೇಕ ಮಂದಿಗೆ ಪರಿಹಾರವೇ ಸಿಕ್ಕಿಲ್ಲ. ಈ ವರ್ಷವೂ ಸಹ ಎಲ್ಲರಿಗೂ ಪರಿಹಾರ ಸಿಗುವ ಬಗ್ಗೆ ಅನುಮಾನವಿದೆ. ಪರಿಹಾರ ಪಡೆಯಲು ಅನುಸರಿಸಬೇಕಾದ ಮಾರ್ಗ ಏನು ಎಂಬುದನ್ನೇ ಸರ್ಕಾರ ಈ ವರೆಗೆ ತಿಳಿಸಿಲ್ಲ. ಹೀಗಾಗಿ ಪ್ಯಾಕೇಜ್ ಎಂಬುದು ಕೇವಲ ಕಣ್ಣೊರೆಸುವ ತಂತ್ರ.

ಪತ್ರಿಕಾ ವಿತರಕರೂ ಇಂದು ನನ್ನನ್ನು ಭೇಟಿ ಮಾಡಿ ಪರಿಹಾರ ಘೋಷಣೆಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ. ಅವರನ್ನೂ ಸಹ ಸರ್ಕಾರ ಪರಿಗಣಿಸಿ ನೆರವು ಒದಗಿಸಬೇಕು. ಜೊತೆಗೆ ಉಳಿದ ಕಾರ್ಮಿಕರಿಗೂ ಸಹಾಯ ಮಾಡಬೇಕು. ತಮಿಳುನಾಡು, ಕೇರಳ ಸೇರಿದಂತೆ ಹಲವಾರು ರಾಜ್ಯಗಳು ಪರಿಹಾರದ ವಿಚಾರದಲ್ಲಿ ಉದಾರತೆ ತೋರಿವೆ. ಆದರೆ, ನಮ್ಮ ಸರ್ಕಾರಕ್ಕೆ ಏಕೆ ಅದು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಕಷ್ಟ ಕಾಲದಲ್ಲಿ ನಮ್ಮ ಪಕ್ಷದ ಎಲ್ಲ ಶಾಸಕರೂ ಜನರ ನೆರವಿಗೆ ನಿಂತಿದ್ದಾರೆ. ದಿನಸಿ ಕಿಟ್, ಔಷಧ, ಆಂಬುಲೆನ್ಸ್ ಮತ್ತಿತರ ನೆರವು ಒದಗಿಸುತ್ತಿದ್ದಾರೆ. ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಲಸಿಕೆ ವಿಚಾರದಲ್ಲಿ ಅಪಪ್ರಚಾರ ಏನಿಲ್ಲ. ಲಸಿಕೆ ಇಲ್ಲ ಎಂಬುದು ವಾಸ್ತವ. 18 ವರ್ಷ ಮೀರಿದವರಿಗೆ ಮೇ 1ರಿಂದ ಲಸಿಕೆ ಎಂದು ಪ್ರಧಾನಿ ಮೋದಿಯವರು ಘೋಷಣೆ ಮಾಡಿದ್ದರು. ಈಗ ಕೊಡುತ್ತಿಲ್ಲ. ಅದು ಸುಳ್ಳೇ ? ಇದರಲ್ಲಿ ಅಪಪ್ರಚಾರ ಏನು ? ಮೇ 1ರಂದು ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದು ಸುಳ್ಳೇ. ಈಗ ಲಸಿಕೆ ಇಲ್ಲದಿವರುವುದು ಸುಳ್ಳೇ ?

ಅಭಿಯಾನಕ್ಕೆ ಚಾಲನೆ ನೀಡಿ ಮೂರು ವಾರಗಳಾದರೂ ರಾಜ್ಯಕ್ಕೆ ಲಸಿಕೆ ಬಂದಿಲ್ಲ. ಸರ್ಕಾರ ಪಾರದರ್ಶಕವಾಗಿರಲಿ. ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡು ಈಗ ಕಾಂಗ್ರೆಸ್ಸಿಗರು ಅಪ ಪ್ರಚಾರ ಮಾಡುತ್ತಿದ್ದಾರೆ ಎಂದರೆ ಹೇಗೆ ?

ಬೇರೆ ದೇಶಗಳಲ್ಲಿ ಅಲ್ಲಿಯ ಅಧ್ಯಕ್ಷರು, ಪ್ರಧಾನಿಗಳೇ ಮೊದಲು ಲಸಿಕೆ ಹಾಕಿಸಿಕೊಂಡರು. ಮೋದಿಯವರೇಕೆ ವಿಳಂಬ ಮಾಡಿದರು. ಅದಕ್ಕೆ ಅನುಮಾನ ಬಂದು ಯಾರೋ ಕೆಲವರು ಅಪಪ್ರಚಾರ ಮಾಡಿರಬಹುದು. ಈಗ ನಾನು ಲಸಿಕೆ ಹಾಕಿಸಿಕೊಂಡಿಲ್ಲವೇ ? ಇಲ್ಲಿಯೇ ಲಸಿಕೆ ಇಲ್ಲವೆಂದ ಮೇಲೆ ಆರು ಕೋಟಿ ಡೋಸ್ ವಿದೇಶಗಳಿಗೆ ರಫ್ತು ಮಾಡಿದ್ದು ಏಕೆ ? ಕರ್ನಾಟಕಕ್ಕೆ ಒಂದು ಕೋಟಿ ಡೋಸ್ ಬಂದಿದೆ ಎಂದು ಹೇಳುತ್ತಿದ್ದಾರೆ. ಇನ್ನೂ ಎಂಟು ಕೋಟಿ ಡೋಸ್ ಬರಬೇಕಿದೆ.

ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿ ಕೊಡಿ. ಲಸಿಕೆ ಖರೀದಿ ಮಾಡಿ ಜನರಿಗೆ ಹಂಚುತ್ತೇವೆ ಎಂದರೆ ಅದಕ್ಕೂ ಒಪ್ಪಿಗೆ ಕೊಡುವುದಿಲ್ಲ. ಸರ್ಕಾರದ ಹಣದಲ್ಲಿ ಲಸಿಕೆ ವಿತರಣೆ ಮಾಡುವುದರಲ್ಲಿ ತಪ್ಪೇನಿದೆ. ಸರ್ಕಾರ ಮಾಡುವುದೂ ಅದೇ ಕೆಲಸ ಅಲ್ಲವೇ?

ಕೊರೊನಾದಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಕ್ಕೆ ಅನುಮತಿ ಕೊಟ್ಟಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ನಾನು ಪರಿಶೀಲನೆ ಸಭೆ ನಡೆಸಲು ಹೊರಟಿರಲಿಲ್ಲ. ಕೇವಲ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಸರ್ಕಾರಕ್ಕೆ ಪತ್ರ ಬರೆದಿದ್ದೆ.

ವಿಪಕ್ಷ ನಾಯಕರು ಮಾಹಿತಿ ಸಂಗ್ರಹಿಸಬಾರದು ಎಂಬ ಸುತ್ತೋಲೆ 2009ರ ವರೆಗೆ ಇರಲಿಲ್ಲ. ಯಡಿಯೂರಪ್ಪವರು ಬಂದ ಬಳಿಕವಷ್ಟೇ ಅಂತಹ ಸುತ್ತೋಲೆ ಹೊರಬಿತ್ತು. ಮಾಹಿತಿ ಹಕ್ಕು ಕಾಯಿದೆ ಜಾರಿಯಲ್ಲಿರುವಾಗ ಮಾಹಿತಿ ಸಂಗ್ರಹಕ್ಕೂ ಅವಕಾಶ ಕೊಡುವುದಿಲ್ಲ ಎಂದರೆ ಸಂವಿಧಾನ ಮತ್ತು ಕಾನೂನು ಬಾಹಿರ. ಸತ್ಯ ಹೊರಗೆ ಬರುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ನಿಲುವು ತಳೆದಿದೆ. ಇನ್ನು ಮಾಹಿತಿ ಕೋರಿ ಅಧಿಕಾರಿಗಳಿಗೆ ಪತ್ರ ಬರೆದರೂ ಉತ್ತರಿಸುವುದಿಲ್ಲ.

ಬ್ಲಾಕ್ ಫಂಗಸ್ ಕಾಯಿಲೆಗೆ ಇಂಜೆಕ್ಷನ್ ದೊರೆಯುತ್ತಿಲ್ಲ. ಮಾರಣಾಂತಿಕ ಕಾಯಿಲೆಗೆ ಔಷಧ ಇಲ್ಲ ಎಂದರೆ ಅದು ಕೊಲೆಗೆ ಸಮಾನ. ಪ್ರಧಾನಿಯವರು ಕಣ್ಣೀರು ಹಾಕಿರುವುದು ನಾಟಕ. ಕಣ್ಣೀರು ಹಾಕುವುದರಿಂದ ಆಕ್ಸಿಜನ್, ಲಸಿಕೆ ಸಿಗುವುದಿಲ್ಲ. ಭಾವನಾತ್ಮಕವಾಗಿ ಜನರನ್ನು ಮರಳು ಮಾಡುವ ಪ್ರಯತ್ನ ಇದು ಎಂದು ಸಿದ್ದರಾಮಯ್ಯ ಅವರು ಟೀಕಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreBlack fungusCovidKannada NewsKannada News LiveKannada News OnlineKannada News WebsiteKannada WebsiteLates News KannadaNews in KannadaNews KannadaOxygenSiddaramaiahState NewsvaccineVentilatorಆಕ್ಸಿಜನ್ಕೋವಿಡ್ಬೆಂಗಳೂರುಬ್ಲಾಕ್ ಫಂಗಸ್ಲಸಿಕೆವೆಂಟಿಲೇಟರ್ಸಿದ್ದರಾಮಯ್ಯ
Share216Tweet123Send
Previous Post

ಶಿವಮೊಗ್ಗದ ಸಾಮಾನ್ಯ ಪೊಲೀಸ್ ಪೇದೆ ಚೌಡಪ್ಪನವರ ಅಸಾಮಾನ್ಯ ಕರ್ತವ್ಯ

Next Post

ಸುರಭಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರ ಕಾರ್ಮಿಕರಿಗೆ ದಿನಸಿ ವಸ್ತುಗಳ ಕಿಟ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುರಭಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರ ಕಾರ್ಮಿಕರಿಗೆ ದಿನಸಿ ವಸ್ತುಗಳ ಕಿಟ್ ವಿತರಣೆ

ಸುರಭಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರ ಕಾರ್ಮಿಕರಿಗೆ ದಿನಸಿ ವಸ್ತುಗಳ ಕಿಟ್ ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL