ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಅಪೊಲೋ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಅರುಣ್ ನಾಯಕ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ವಿಜಯ್ ಅವರು ಪ್ರಸ್ತುತ ನ್ಯೂರೋ ಐಸಿಯುನಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದಾರೆ. ಕೋಮದಲ್ಲಿರುವ ಅವರ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದ್ದು, ಚೇತರಿಕೆಗಾಗಿ ಅತ್ಯುತ್ತಮ ಹಾಗೂ ಗರಿಷ್ಟ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ.
ಜೂನ್ 12ರ ರಾತ್ರಿ ಬೈಕ್ ಅಪಘಾತಕ್ಕೊಳಗಾಗಿದ್ದ ವಿಜಯ್ ಅವರಿಗೆ ಮೆದುಳಿನೊಳಗೆ ತೀವ್ರ ರಕ್ತಸ್ರಾವ ಆಗಿದ್ದು, ತೊಡೆಯ ಮೂಳೆಯೂ ಸಹ ಮುರಿದು ಹೋಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post