ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸುನೇತ್ರಾ ಪಂಡಿತ್ Actor Sunethra Pandit ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ನಗರದ ಎನ್.ಆರ್. ಕಾಲೋನಿ 9ನೇ ಅಡ್ಡ ರಸ್ತೆಯಲ್ಲಿ ನಿನ್ನೆ ಅಪಘಾತ ಸಂಭವಿಸಿತ್ತು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸುನೇತ್ರಾ ಪಂಡಿತ್ ಹಂಪ್ಸ್ ನೋಡದೆ ಗಾಡಿಯನ್ನು ಚಲಾಯಿಸಿದ್ದರಿಂದ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ಪಾದಚಾರಿ ಮಾರ್ಗದ ಮೇಲೆ ಬಿದ್ದ ರಭಸಕ್ಕೆ ಹೆಲ್ಮೆಟ್ ಚೂರಾಗಿ, ತಲೆಗೆ ತೀವ್ರ ಪೆಟ್ಟಾಗಿದೆ. ಈ ವೇಳೆ ಜೋರಾದ ಶಬ್ಧ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಸುನೇತ್ರಾ ಪಂಡಿತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಈ ನಡುವೆ ಅಪಘಾತಕ್ಕೆ ಹದಗೆಟ್ಟ ರಸ್ತೆ ಹಾಗೂ ಅವೈಜ್ಞಾನಿಕ ಹಂಪ್ಸ್ ಕಾರಣ ಎಂದು ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ರಸ್ತೆ ತೀವ್ರವಾಗಿ ಹದಗೆಟ್ಟಿದ್ದರಿಂದ ಸ್ಕೂಟರ್ ನಿಯಂತ್ರಣ ತಪ್ಪಿದೆ ಎಂದು ಹೇಳಿದ್ದಾರೆ.
Also read: ಭದ್ರಾವತಿ: ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ, ಹಸುಗಳ ರಕ್ಷಣೆ, ಗೋಮಾಂಸ ವಶ
ಘಟನೆಯ ಸಿಸಿಟಿವಿ ವಿಡಿಯೋಗಳು ಸಾಮಾಜಿಗ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದ್ದು, ಎನ್ಆರ್ ಕಾಲೋನಿಯ 9ನೇ ಅಡ್ಡ ರಸ್ತೆಯಲ್ಲಿ ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post