ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ ಎ ಸ್.ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.
Also read: ಜಿಮ್ ದೇಶೀಯ ರೋಡ್ ಶೋಗೆ ದಿಲ್ಲಿಯಲ್ಲಿ ಚಾಲನೆ ನೀಡಿದ ಸಚಿವ ನಿರಾಣಿ
ಪರವಾನಗಿ ಇಲ್ಲದ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕ್ಕೆ ಸೂಚನೆ
ಓಲಾ, ಊಬರ್ ಪರವಾನಗಿ ರದ್ದಾಗಿರುವ ಬಗ್ಗೆ ಸಾರಿಗೆ ಆಯುಕ್ತರೊಂದಿಗೆ ಮಾತನಾಡಿದ್ದು, ಯಾವುದೇ ಪರವಾನಗಿ ಇಲ್ಲದೆ ಯಾವ ಸಂಸ್ಥೆಯನ್ನೂ ನಡೆಸಬಾರದು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post