ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬ್ರಾಹ್ಮಣ ಸಮುದಾಯ ಹಾಗೂ ಬ್ರಾಹ್ಮಣ್ಯದ ವಿರುದ್ಧ ಅವಹೇಳನಕಾರಿಯಾದ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಆ ದಿನಗಳು ಚಿತ್ರದ ನಾಯಕ ಚೇತನ್ ವಿರುದ್ಧ ಬಸವನಗುಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಎನ್ನುವವವರು, ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 129ಎ (ಧಾರ್ಮಿಕ ಭಾವನೆ ಕೆರಳಿಸುವುದು) ಹಾಗೂ ಐಪಿಸಿ 153ಬಿ (ದ್ವೇಷ ಭಾವನೆ ಹೆಚ್ಚಿಸುವ) ಆರೋಪದಡಿಯಲ್ಲಿ ಚೇತನ್ ವಿರುದ್ಧ ಎಪ್ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹಿಂದೂ ಧರ್ಮ ನಾನಾ ಪ್ರವರ್ಗಗಳಲ್ಲಿ ಇರುವವರನ್ನು ಬೇರ್ಪಡಿಸಿ ಅವರಿಗೆ ಧರ್ಮಾಂದತೆಯನ್ನು ಹುಟ್ಟು ಹಾಕುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಚೇತನ್ ಇಂತಹ ಮಾತುಗಳನ್ನಾಡಿದ್ದಾರೆ ಎಂದು ದೂರಲಾಗಿದೆ.
ಪ್ರಮುಖವಾಗಿ ಲಾಕ್ಡೌನ್ ವೇಳೆ ಬ್ರಾಹ್ಮಣ ಅಭಿವೃದ್ಧಿ ನಿಗಮದ ವತಿಯಿಂದ ವಿಪ್ರ ಸಮುದಾಯದವರಿಗೆ ಪ್ರತ್ಯೇಕ ಆಹಾರ ಕಿಟ್ ವಿತರಣೆ ಮಾಡಿರುವ ಕುರಿತಾಗಿ ಚೇತನ್ ಅವಹೇಳನಕಾರಿಯಾಗಿ ಮಾತನಾಡಿದ್ದರು.
ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಚೇತನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post