ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ #Zameer Ahmad Khan ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಎಂದೂ ಜನರಿಂದ ಬಹುಮತ ಪಡೆಯದ ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದು ಹತ್ತಾರು ಹಗರಣ ಮಾಡಿ 40 ಪರ್ಸೆಂಟ್ ಸರ್ಕಾರ ಎಂಬ ಕುಖ್ಯಾತಿ ಪಡೆದು ಜನರಿಂದ ತಿರಸ್ಕೃತ ವಾಗಿದೆ. ಪ್ರತಿ ಪಕ್ಷ ಸ್ಥಾನದ ಜವಾಬ್ದಾರಿ ಯನ್ನೂ ಸರಿಯಾಗಿ ನಿಭಾಯಿಸದೆ ವಿಫಲಗೊಂಡು ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಎಂಬ ಹೊಸ ನಾಟಕ ಆರಂಭಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Also read: ಗ್ಯಾರೆಂಟಿ ವಾಪಾಸ್! ವಿದ್ಯುತ್ ಸಬ್ಸಿಡಿಯಿಂದ ಹಿಂದೆ ಸರಿಯಿರಿ | ನಾಗರಿಕರಿಗೆ ಹಿಮಾಚಲ ಪ್ರದೇಶ ಸಿಎಂ ಕರೆ

ವಖ್ಫ್ ವಿಚಾರದಲ್ಲಿ ಅಧಿವೇಶನ ದಲ್ಲಿ ಎರಡೂ ಸದನಗಳಲ್ಲಿ ಸಮರ್ಪಕ ಉತ್ತರ ನೀಡಲಾಗಿದೆ. ಆಗ ಗಪ್ ಚುಪ್ ಆಗಿ ಯಾರೂ ಏನೂ ಮಾತನಾಡಲಿಲ್ಲ. ವಿಧಾನ ಸಭೆಯಲ್ಲಿ ಉತ್ತರ ನೀಡುವಾಗ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಪ್ಪಿಸಿಕೊಂಡು ಹೋದರು. ಅಂದು ನಾಪತ್ತೆ ಆಗಿದ್ದವರು ಈಗ ಮತ್ತೆ ಕಂಪ್ಲಿ ಯಿಂದ ಹೋರಾಟ ಎಂದು ಹೊರಟಿದ್ದಾರೆ. ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವ ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ. ಬಿಜೆಪಿಯವರು ಎಷ್ಟೇ ಬಟ್ಟೆ ಹರಿದುಕೊಂಡು ಅರಚಿದರೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಜಮೀರ್ ಅಹಮದ್ ಖಾನ್ ಅವರು ಸವಾಲು ಹಾಕಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post