ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post