ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಲವು ತಿಂಗಳಿನಿಂದ ಊಹಾಪೋಹಕ್ಕೆ ಕಾರಣವಾಗಿರುವ ಮಂಡ್ಯ ಸಂಸದೆ ಸುಮಲತಾ MP Sumalatha ಅವರು ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ ಎಂದು ವರದಿಯಾಗಿದೆ.
ಸುಮಲತಾ ಅವರೊಂದಿಗೆ ಬಿಜೆಪಿ ಮುಖಂಡರು ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಇವರ ಆಪ್ತರು ಈಗಾಗಲೇ ಕಮಲ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅಲ್ಲದೇ, ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನೂ ಸಹ ಸುಮಲತಾ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಮದ್ದೂರಿಗೆ ಭೇಟಿ ನೀಡಿ ಸಮಾವೇಶ ನಡೆಸಲಿದ್ದು, ಈ ವೇಳೆ ಅವರ ಸಮ್ಮುಖದಲ್ಲೇ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
Also read: ಮಾ.9ರಿಂದ ದ್ವಿತೀಯ ಪಿಯು ಪರೀಕ್ಷೆ: ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post