ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) #ISRO ತನ್ನ 101ನೇ ಉಪಗ್ರಹವನ್ನು ಉಡಾವಣೆಗೆ ಸಜ್ಜಾಗಿದ್ದು, ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗುತ್ತಿರುವುದು ಭಾರತೀಯರ ಹೆಮ್ಮೆಯ ಸಂಗತಿಯಾಗಿದೆ.
ಹೌದು… ಮೇ 18ರಂದು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ #Satish Dhawan Space Centre in Shriharikota PSLV-C61/EOS-09 ಕಾರ್ಯಾಚರಣೆಯೊಂದಿಗೆ ಮಾಡಲಿದೆ. ಈ ಕಾರ್ಯಾಚರಣೆಯಡಿಯಲ್ಲಿ ವಿಜ್ಞಾನಿಗಳು ಭಾರತದ ಎಲ್ಲಾ ಹವಾಮಾನ ಭೂ ವೀಕ್ಷಣಾ ಸಾಮರ್ಥ್ಯ ಹೊಂದಿರುವ ಉಪಗ್ರಹವನ್ನು ಸೂರ್ಯನ ಸಿಂಕ್ರೊನಸ್ ಧ್ರುವ ಕಕ್ಷೆಯಲ್ಲಿ (SPO) ಇರಿಸಲಿದ್ದಾರೆ.

EOS-09ನ ಮುಖ್ಯ ಉದ್ದೇಶ ಕೃಷಿ, ಅರಣ್ಯ ಮೇಲ್ವಿಚಾರಣೆ, ವಿಪತ್ತು ನಿರ್ವಹಣೆ, ನಗರ ಯೋಜನೆ ಮತ್ತು ರಾಷ್ಟ್ರೀಯ ಭದ್ರತೆಯಂತಹ ಕ್ಷೇತ್ರಗಳಿಗೆ ನೆರವಾಗುವುದಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಂತಹ ಇತ್ತೀಚಿನ ಭದ್ರತಾ ಘಟನೆಗಳ ಮೇಲ್ವಿಚಾರಣೆ ಮಾಡಲಿದೆ. ಸೂಕ್ಷ್ಮ ಗಡಿಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸುವ ನಿಟ್ಟಿನಲ್ಲಿ ಉಪಗ್ರಹ ಕಾರ್ಯ ನಿರ್ವಹಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post