ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರ ಸಂಪೂರ್ಣ ದೀವಾಳಿಯಾಗಿದ್ದು, ಹಣಕಾಸಿನ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ RAshok ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿ ಹದಗೆಟ್ಟಿದೆ. ಹೀಗಾಗಿ, ಶ್ವೇತಪತ್ರ ಹೊರಡಿಸಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅರ್ಧಂಬರ್ಧ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಲಾಗುತ್ತಿದೆ. ಇದು ಸಂವೇದನಾರಹಿತ ಎಡಬಿಡಂಗಿ ಸರ್ಕಾರ ಎಂದು ಕಿಡಿ ಕಾರಿದರು.
Also read: ಶಾಲೆಗಳಿಗೆ ಬಾಂಬ್ ಬೆದರಿಕೆ ಉಗ್ರರ ಕೆಲಸದಂತಿದೆ: ಪ್ರತಿಪಕ್ಷ ನಾಯಕ ಅಶೋಕ್ ಸಂಶಯ
ಬರ ನಿರ್ವಹಣೆ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂದು ಸರ್ಕಾರ ಹೇಳಿದೆ. ಅದು ನಿಜವೇ ಆಗಿದ್ದರೆ ತಕ್ಷಣ ಹಣ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post