ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರದ ವಿವಿಧೆಡೆ, ವಿವಿಧ ವ್ಯಕ್ತಿಗಳ ಮೇಲೆ ನಡೆದಿರುವ ಆದಾಯ ತೆರಿಗೆ ದಾಳಿ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿರಾಕರಿಸಿದರು.
ಸಿಂಧಗಿಗೆ ತೆರಳುವ ಮುನ್ನ ಕಲಬುರಗಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಉಪ ಚುನಾವಣೆ ವೇಳೆಯಲ್ಲಿ ಈ ದಾಳಿ ನಡೆದಿದೆ. ಬಹುಶಃ ತಮಗೆ ಸಿಕ್ಕಿರುವ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿರಬಹುದೇನೋ ಎಂದರು.
ಯಡಿಯೂರಪ್ಪ ಅವರು ಎರಡು ವರ್ಷ ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರನ ಜತೆ ಕೆಲಸ ಮಾಡಿದ್ದ ಆಪ್ತನ ಮನೆ ಮೇಲೆ ದಾಳಿ ಆಗಿರುವುದು ಎಲ್ಲೋ ಒಂದು ಕಡೆ ಬಿಜೆಪಿ ಆಂತರಿಕ ವಿಷಯಗಳಿಗೆ ಸಂಬಂಧಪಟ್ಟಿರಬಹುದು. ಅವರನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ನಡೆದಿರುವ ದಾಳಿ ಇದಾಗಿರಲೂಬಹುದು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post