No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

ತೆಲಂಗಾಣದಲ್ಲಿ ಕಾಂಗ್ರೆಸ್ಸಿನ ಬರ ನೀಗಿಸಲು ಮಂತ್ರಿಗಳು ದುಡಿಯುತ್ತಿದ್ದಾರೆ | ಖಜಾನೆ ಖಾಲಿ ಆಗಿಲ್ಲ ಎಂದಾದರೆ ಪರಿಹಾರ ಬಿಡುಗಡೆ ಮಾಡಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2023
in ಬೆಂಗಳೂರು ನಗರ
0
ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ Opposition Leader RAshok ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹರಿಹಾಯ್ದರು.
ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದರು.

Also read: ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೆಕ್ಕಪತ್ರ ಮಂಡಿಸಲಿ
ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ದಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು, ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದಾರೆ ಎಂದರು.

ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ, ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಇವರು ಮಾಡಿರುವ ಖರ್ಚು ವೆಚ್ಚ ಮತ್ತು ಹಣಕಾಸಿನ ಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಆಗ್ರಹಿಸಲಾಗುವುದು ಎಂದರು.

http://kalpa.news/wp-content/uploads/2023/11/VID-20231128-WA0027.mp4

 

ಬೋಗಸ್ ದರ್ಶನ
ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು ಬೋಗಸ್ ದರ್ಶನ ಎಂದು ಲೇವಡಿ ಮಾಡಿದ ಅಶೋಕ್ ಅವರು, ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದಿದ್ದರೆ ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
Kalahamsa Infotech private limitedನಿದ್ದೆಯಿಂದ ಇವತ್ತು ಎದ್ದಿದೆ
ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆ ಎಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ. ಏಕೆಂದರೆ ಆಡಳಿತ ಸಂಪೂರ್ಣ ನೆಲಕಚ್ಚಿದ್ದು ಅಧಿಕಾರಶಾಹಿ ಜನರ ಶೋಷಣೆಯಲ್ಲಿ ನಿರತವಾಗಿದೆ. ಇದನ್ನು ಗಮನಿಸಿ ಸರಿಪಡಿಸಬೇಕಿದ್ದ ಸಚಿವರು ತೆಲಂಗಾಣ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಕ್ರಾಂತಿ ಆಗಿದೆ ಎಂದು ಬುರುಡೆ ಭಾಷಣ ಬಿಗಿಯುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಡಿದಿರುವ ಬರಗಾಲ ನಿವಾರಣೆಗಾಗಿ ಸಿದ್ದರಾಮಯ್ಯ ಎಲ್ಲಾ ಸಚಿವರನ್ನು ಅಲ್ಲಿಗೆ ನಿಯೋಜಿಸಿದ್ದಾರೆ. ಇಲ್ಲಿ ಜನ ತತ್ತರಿಸುತ್ತಿದ್ದರೂ ಕೇಳುವವರು ದಿಕ್ಕಿಲ್ಲ ಎಂದು ಕಿಡಿಕಾರಿದರು.

ಮೊದಲು ಪಕ್ಷದ ಸಿದ್ಧಾಂತ ಅರಿತುಕೊಳ್ಳಲಿ
ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ, ಅವರು ಈಗಾಗಲೇ ಮೂರು ಪಕ್ಷಗಳಿಗೆ ಪಕ್ಷಾಂತರ ಮಾಡಿದ್ದಾರೆ. ಹೀಗಾಗಿ ಪಕ್ಷಗಳ ಸಂಸ್ಥಾಪಕ ಅಧ್ಯಕ್ಷರು ಯಾರ್ಯಾರು ಎಂಬುದನ್ನೇ ತಿಳಿದುಕೊಂಡಿಲ್ಲ. ಕಾಂಗ್ರೆಸ್ ಸ್ಥಾಪಕ ಅಧ್ಯಕ್ಷ ಬ್ರಿಟಿಷ್‌ ಎಂಬುದೂ ಗೊತ್ತಿಲ್ಲ. ಅವರ ಪರಂಪರೆಯೇ ಕಾಂಗ್ರೆಸ್ ನಲ್ಲಿ ಮುಂದುವರೆಯುತ್ತಿದೆ. ಯುಪಿಎ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರಿಗೆ ಕಾಸು ಕೊಟ್ಟು ಕಲ್ಲು ಹೊಡೆಸುತ್ತಿದ್ದರು. ಅವರೆಲ್ಲರೂ ಈಗ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಜನಜೀವನ ಸಹಜಸ್ಥಿತಿಗೆ ಮರಳಿದೆ. ಇದಕ್ಕೆ ಮೋದಿ ಸರಕಾರದ ಕಠಿಣ ಕ್ರಮಗಳು ಕಾರಣ ಎಂದೂ ಅಶೋಕ್ ವಿವರಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaOpposition LeaderR Ashokಆರ್. ಅಶೋಕ್ಪ್ರತಿಪಕ್ಷ ನಾಯಕಬೆಂಗಳೂರುಶ್ವೇತಪತ್ರ
Share197Tweet123Send
Previous Post

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL