ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಿಜೆಪಿ ತೊರೆದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ Jagadish Shettar ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarujuna Kharge ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್’ಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ ಮೂರು ದಶಕಗಳ ಸಂಬAಧಕ್ಕೆ ಅಂತ್ಯ ಹಾಡಿದ್ದಾರೆ.

Also read: ಒಂದಿಂಚು ಭೂಮಿಯ ಅತಿಕ್ರಮಣವನ್ನು ಸಹಿಸುವುದಿಲ್ಲ: ಚೀನಾಕ್ಕೆ ಅಮಿತ್ ಶಾ ಎಚ್ಚರಿಕೆ
ಇನ್ನು, ತಮ್ಮ ಆಪ್ತ ಸಹಾಯಕರ ಮುಖಾಂತರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಶೆಟ್ಟರ್ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.












Discussion about this post