No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಲಜೀವನ್‌ ಮಿಷನ್‌ ಕಾಮಗಾರಿ | ಲೋಪವಾಗದಂತೆ ಎಚ್ಚರ ವಹಿಸಿ | ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಜಿಲ್ಲಾಪಂಚಾಯತಿ ಸಿಇಒಗಳೊಂದಿಗೆ ವೀಡಿಯೋ ಸಭೆ

kalpa News by kalpa News
December 4, 2024
in ಬೆಂಗಳೂರು ನಗರ
0
ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಸಂಗ್ರಹಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಮೂಲಕ ಈ ತಿಂಗಳಾಂತ್ಯದೊಳಗೆ ನಿಗದಿತ ಗುರಿಯನ್ನು ಸಾಧಿಸಲು ಮುಂದಾಗಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ #Minister Priyanka Kharge ಅಧಿಕಾರಿಗಳಿಗೆ ಸೂಚಿಸಿದರು.

ಪಂಚಾಯತಿಗಳ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮ ಪಂಚಾಯತಿಗಳ ತೆರಿಗೆಯನ್ನು ಸಮರ್ಪವಾಗಿ ಸಂಗ್ರಹಿಸುವ ಅನಿವಾರ್ಯತೆ ಇದೆ ಎಂದೂ ಸಚಿವರು ಹೇಳಿದರು.
ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ ಸಲುವಾಗಿಯೇ ಸಭೆ ನಡೆಸಬೇಕೆಂದು ಸಚಿವರು ಸೂಚಿಸಿದರಲ್ಲದೆ, ಆದ್ಯತಾ ಕೆಲಸಗಳತ್ತ ವಿಶೇಷ ಗಮನ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಸದೃಢಗೊಳಿಸಬೇಕೆಂದು ಹೇಳಿದರು.

ಸಚಿವರು ಇಂದು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಮ್ಮೇಳನ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಪ್ರಗತಿ ವಿಮರ್ಶಿಸಿದರು.

Also read: ಪ್ರಗತಿ ಪರಿಶೀಲನೆ | ಅಧಿಕಾರಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ವೀಡಿಯೋ ಸಂವಾದ

ಗ್ರಾಮಸಭೆಗಳನ್ನು ನಡೆಸುವಲ್ಲಿ ಕೆಲವು ಗ್ರಾಮ ಪಂಚಾಯತಿಗಳು ಆಸಕ್ತಿ ತೋರದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಸಚಿವರು ಸೋಷಿಯಲ್‌ ಆಡಿಟ್‌ ಆಗದೆ ಅನುದಾನ ನಿರೀಕ್ಷಿಸಲು ಸಾಧ್ಯವಿಲ್ಲ, ಇದರಿಂದ ಗ್ರಾಮಗಳ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದು ಹೇಳಿದ ಸಚಿವರು ಗ್ರಾಮಸಭೆಗಳನ್ನು ನಡೆಸಲು ಸೂಕ್ತ ನಿರ್ದೇಶನ ನೀಡಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಲಜೀವನ್‌ ಮಿಷನ್‌ ಕಾರ್ಯಕ್ರಮದಡಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆವಹಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು. ಕಳಪೆ ಸಾಮಗ್ರಿಗಳ ಬಳಕೆ ಮಾಡದಂತೆ ಹಾಗೂ ಗುಣಮಟ್ಟವಿಲ್ಲದ ಕಾಮಗಾರಿಗಳು ನಡೆಯದಂತೆ ತಡೆಯಬೇಕೆಂದು ಸಚಿವರು ಹೇಳಿದರಲ್ಲದೆ, ಗ್ರಾಮೀಣ ಜನರ ಮನೆ ಮನೆಗೆ ನೀರು ತಲುಪಿಸುವ ಈ ಯೋಜನೆಯಲ್ಲಿ ಸರ್ಕಾರದ ಹಣ ಸಮರ್ಪವಾಗಿ ಬಳಕೆಯಾಗುವಂತೆ ಎಚ್ಚರವಹಿಸಬೇಕಾಗಿರುವುದು ಅಧಿಕಾರಿಗಳ ಹೊಣೆಗಾರಿಕೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಸರ್ಕಾರ ಈ ವರ್ಷದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಘೋಷಿಸಿದ ಕಲ್ಯಾಣಪಥ ಯೋಜನೆಯನ್ನು ಈ ತಿಂಗಳು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದೂ ಸಚಿವರು ಸಭೆಯಲ್ಲಿ ಪ್ರಕಟಿಸಿದರು.

ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕಚೇರಿ ಸೂಚಿಸಿರುವ ಮಾನದಂಡಗಳಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕೆಂದು ನಿರ್ದೇಶನ ನೀಡಿದ ಸಚಿವರು ಮಾನದಂಡಗಳನ್ನು ಬದಲಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಎಂಜನಿಯರುಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ಈಚೆಗೆ ಬೆಂಗಳೂರಿನಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಅಧಿಕಾರಿಗಳ ರಾಜ್ಯ ಮಟ್ಟದ ಶೃಂಗಸಭೆಯಲ್ಲಿ ಪಂಚಸೂತ್ರಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು, ಅದರಂತೆ ಜಿಲ್ಲಾ ಮಟ್ಟದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಜಿಲ್ಲೆಯ 19 ಗ್ರಾಮ ಪಂಚಾಯತಿಗಳನ್ನು ದತ್ತು ಪಡೆದು ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಳ್ಳಲು ಸೂಚಿಸಲಾಗಿತ್ತು, ಈ ಬಗ್ಗೆ ಯಾವುದೇ ಕ್ರಮ ಆಗಿಲ್ಲ ಎಂಬುದನ್ನು ನೆನಪಿಸಿದ ಸಚಿವರು ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Priyanka KhargeNews_in_KannadaNews_Kannadaಬೆಂಗಳೂರುಸಚಿವ ಪ್ರಿಯಾಂಕ್ ಖರ್ಗೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಗತಿ ಪರಿಶೀಲನೆ | ಅಧಿಕಾರಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ವೀಡಿಯೋ ಸಂವಾದ

Next Post

ಗಮನಿಸಿ! ಡಿ.5ರಂದು ಭದ್ರಾವತಿ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.5ರಂದು ಭದ್ರಾವತಿ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL