ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುದ್ದಾರೆ.
ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ #Janaspandana ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು. ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.

Also read: ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ
ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ. ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.

ಜನಸ್ಪಂದನ
ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಳ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post