No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೆಇ ಮೆದುಳು ಜ್ವರ ನಿಯಂತ್ರಣ ಹಿನ್ನೆಲೆ ಡಿ.5ರಿಂದ ವಿಶೇಷ ಲಸಿಕಾ ಅಭಿಯಾನ

1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

kalpa News by kalpa News
December 5, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ Minister Sudhakar ತಿಳಿಸಿದ್ದಾರೆ.

ಜೆಇ ಮೆದುಳು ಜ್ವರ *’ಪ್ಲೇವಿವೈರಸ್’ ಎಂಬ ವೈರಾಣುವಿನಿಂದ* ಬರುತ್ತದೆ. ಇದು ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಹೋಸ್ಟ್ ಆಗಿರುತ್ತಾರೆ.
ಜೆಇ ಲಸಿಕಾ ಅಭಿಯಾನ ಕುರಿತು ಮಾಹಿತಿ ನೀಡಿದ ಸಚಿವರು, ಡಿಸೆಂಬರ್ ಮೊದಲನೇ ವಾರದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದರು.

ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ಪಿಡುಗು ಗುರುತಿಸಲಾಗಿದೆ. ಭಾರತವೂ ಸೇರಿದಂತೆ ಏಷ್ಯಾದ 11 ಏಷ್ಯಾ ರಾಷ್ಟ್ರಗಳು ಈ ಪಟ್ಟಿಯಲ್ಲಿದೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ.20 ರಿಂದ ಶೇ.30 ರಷ್ಟಿದೆ. ಗುಣಮುಖರಾದ ಶೇ.30 ರಿಂದ ಶೇ.50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ
ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗಿವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955 ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. 2016 ರಲ್ಲಿ 11 ಪ್ರಕರಣಗಳು, 2017 ರಲ್ಲಿ 23 ಪ್ರಕರಣಗಳು, 2018 ರಲ್ಲಿ 35 ಪ್ರಕರಣಗಳು, 2019 ರಲ್ಲಿ 33 ಪ್ರಕರಣಗಳು, 2020 ರಲ್ಲಿ 19 ಪ್ರಕರಣಗಳು, 2021 ರಲ್ಲಿ 25 ಪ್ರಕರಣಗಳು, 2022 ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ. ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್‍ಎಸ್‍ಎಲ್‍) ಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

Also read: ವೀಕ್ಷಕರ ಗಮನವನ್ನು ಹಿಡಿದಿಡುವ ಸಾಮರ್ಥ್ಯದ ಚಿತ್ರ `ಧರಣಿ ಮಂಡಲ ಮಧ್ಯದೊಳಗೆ’

10 ಜಿಲ್ಲೆಗಳಲ್ಲಿ ಲಸಿಕಾಕರಣ:
ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೆಇ ಹರಡದ ಅವಧಿಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಈ ಅಭಿಯಾನದಲ್ಲಿ 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು‌ ಎಂದು ಸಚಿವರು ವಿವರಿಸಿದರು.

ನಾವೀಗ ಮೆದುಳು ಜ್ವರದ ವಿರುದ್ಧ ಯುದ್ಧ ಸಾರಬೇಕಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆಯು ಎಲ್ಲಾ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಸಚಿವ ಡಾ. ಕೆ ಸುಧಾಕರ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೀಕ್ಷಕರ ಗಮನವನ್ನು ಹಿಡಿದಿಡುವ ಸಾಮರ್ಥ್ಯದ ಚಿತ್ರ `ಧರಣಿ ಮಂಡಲ ಮಧ್ಯದೊಳಗೆ’

Next Post

ಜನ ಸಂಕಲ್ಪ ಯಾತ್ರೆಯನ್ನು ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ: ಸಿಎಂ ಬೊಮ್ಮಾಯಿ

kalpa News

kalpa News

Next Post
ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಜನ ಸಂಕಲ್ಪ ಯಾತ್ರೆಯನ್ನು ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL