No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕದ 7 ಅದ್ಭುತಗಳ ಪಟ್ಟಿಯಲ್ಲಿ ಜೋಗ ಜಲಪಾತ: ಆಕರ್ಷಕ ತಾಣಗಳ ಮಾಹಿತಿ ಇಲ್ಲಿದೆ

ವಿಜೇತ ತಾಣಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರಮಾಣಪತ್ರ ಹಸ್ತಾಂತರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2023
in ಬೆಂಗಳೂರು ನಗರ
0
ಕರ್ನಾಟಕದ 7 ಅದ್ಭುತಗಳ ಪಟ್ಟಿಯಲ್ಲಿ ಜೋಗ ಜಲಪಾತ: ಆಕರ್ಷಕ ತಾಣಗಳ ಮಾಹಿತಿ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಿಸರ್ಗ ರಮಣೀಯ ಶಿವಮೊಗ್ಗ ಜಿಲ್ಲೆಯ ಸಮಸ್ತ ನಾಗರಿಕರಿಗೆ ಸಂತೋಷದ ಸುದ್ದಿ. ಜಾಗತಿಕ ಹೆಗ್ಗುರುತುಗಳಾಗಿ ‘ಪ್ರಪಂಚದ 7 ಅದ್ಭುತಗಳು’ ಇರುವಂತೆಯೇ ಇದೀಗ ಕರುನಾಡಿನ ಹೆಗ್ಗುರುತುಗಳಾಗಿ ‘ಕರ್ನಾಟಕದ 7 ಅದ್ಭುತ’ ತಾಣಗಳ ಘೋಷಣೆಯಾಗಿದೆ.
ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ ತಾಣಗಳನ್ನು ನಾಡಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಕರ್ನಾಟಕದ 7 ಅದ್ಭುತಗಳು’ ಎಂದು ಘೋಷಿಸಿದ್ದಾರೆ. ಈ ಪೈಕಿ ಜಗತ್ಪ್ರಸಿದ್ಧವಾಗಿರುವ ಜೋಗ ಜಲಪಾತವೂ ಒಂದು.

ಬೆಂಗಳೂರಿನ ಪಂಚತಾರಾ ಹೋಟೆಲ್‌ವೊಂದರಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ‘ಕರ್ನಾಟಕದ 7 ಅದ್ಭುತ’ಗಳನ್ನು ಉದ್ಘೋಷಿಸಲಾಯಿತು. ಇದೇ ವೇಳೆ, ವಿಜೇತ ತಾಣಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಲಾಯಿತು. ನಾಡಿನ ಏಳು ಅದ್ಭುತ ತಾಣಗಳನ್ನು ಏಳು ವಿಭಾಗಗಳ ಅಡಿಯಲ್ಲಿ ಹೆಸರಿಸಲಾಗಿದ್ದು, ಅವು ಇಂತಿವೆ.

  1. ಹಿರೇಬೆಣಕಲ್ ಶಿಲಾಸಮಾಧಿಗಳು: ಕ್ರಿ.ಪೂ.800ರಿಂದ 200ರವರೆಗಿನ ಕಾಲದ್ದು ಎನ್ನಲಾದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನಲ್ಲಿರುವ ಪ್ರಾಗೈತಿಹಾಸಿಕ ತಾಣವನ್ನು ‘ಬೃಹತ್ ಶಿಲಾಯುಗದ ಅದ್ಭುತ’ ಎಂದು ಘೋಷಿಸಲಾಗಿದೆ.
  2. ಹಂಪಿ: 14ರಿಂದ 16ನೇ ಶತಮಾನದ ನಡುವೆ ನಿರ್ಮಾಣಗೊಂಡ ಬವ್ಯ ವಿಜಯನಗರ ಸಾಮ್ರಾಜ್ಯದ ವೈಬವವನ್ನು ಸಾರುವ ಈಗಿನ ವಿಜಯನಗರ ಜಿಲ್ಲೆಯ ‘ಹಂಪಿ’ಯನ್ನು ‘ಪುರಾತತ್ವ ಅದ್ಭುತ’ ಎಂದು ಘೋಷಿಸಲಾಗಿದೆ.
  3. ಗೊಮ್ಮಟೇಶ್ವರ: ಈಗಿನ ಹಾಸನ ಜಿಲ್ಲೆ ಶ್ರವಣಬೆಳಗೊಳದ ವಿಂಧ್ಯಾಗಿರಿಯ ನೆತ್ತಿಯಲ್ಲಿ 10ನೇ ಶತಮಾನದಲ್ಲಿ ಸ್ಥಾಪನೆಯಾದ 87 ಅಡಿಯ ಭವ್ಯ ಗೊಮ್ಮಟೇಶ್ವರ ಪ್ರತಿಮೆಯನ್ನು ‘ತಾತ್ವಿಕ ಅದ್ಭುತ’ವೆಂದು ಘೋಷಿಸಲಾಗಿದೆ.
  4. ಗೋಲಗುಮ್ಮಟ: 17ನೇ ಶತಮಾನದಲ್ಲಿ ಆಗಿನ ಬಿಜಾಪುರ (ಹಾಲಿ ವಿಜಯಪುರ) ಸುಲ್ತಾನ ಮೊಹಮ್ಮದ್ ಆದಿಲ್ ಶಾಹ್ ನಿರ್ಮಿಸಿದ ಬೃಹತ್ ಗೋಲಗುಮ್ಮಟವು ‘ವಾಸ್ತು ವಿಜ್ಞಾನ ಅದ್ಭುತ’ವೆಂಬ ಗೌರವಕ್ಕೆ ಪಾತ್ರವಾಗಿದೆ.
  5. ಮೈಸೂರು ಅರಮನೆ: 19-20ನೇ ಶತಮಾನದಲ್ಲಿ ಒಡೆಯರ್ ರಾಜವಂಶಸ್ಥರಿಂದ ನಿರ್ಮಾಣಗೊಂಡ ಮೈಸೂರಿನ ಜಗದ್ವಿಖ್ಯಾತ ಅಂಬಾ ವಿಲಾಸ ಅರಮನೆಯನ್ನು ‘ರಾಜಪರಂಪರಾ ಅದ್ಭುತ’ ಎಂದು ಘೋಷಿಸಲಾಗಿದೆ.
  6. ಜೋಗ ಜಲಪಾತ: ‘ಬಾರತದಲ್ಲೇ ಅತಿ ಸುಂದರ ಎನಿಸಿರುವ, 830 ಅಡಿ ಎತ್ತರದಿಂದ ‘ುಮುಕುವ ಶಿವಮೊಗ್ಗ ಜಿಲ್ಲೆಯ ವಿಶ್ವಪ್ರಸಿದ್ಧ ಜೋಗ ಜಲಪಾತವನ್ನು ‘ನೈಸರ್ಗಿಕ ಅದ್ಭುತ-ನೆಲ’ ಎಂದು ಘೋಷಿಸಲಾಗಿದೆ.
  7. ನೇತ್ರಾಣಿ ದ್ವೀಪ: ಉತ್ತರ ಕನ್ನಡ ಜಿಲ್ಲೆ ಮುರುಡೇಶ್ವರ ಬಳಿಯ ಅರಬ್ಬಿ ಸಮುದ್ರದ ನಡುವೆ ಪ್ರೀತಿಯ ಸಂಕೇತದಂತೆ ಹೃದಯಾಕಾರದಲ್ಲಿರುವ ನೇತ್ರಾಣಿ ದ್ವೀಪವನ್ನು ‘ನೈಸರ್ಗಿಕ ಅದ್ಭುತ-ಜಲ’ ಎಂದು ಘೋಷಿಸಲಾಗಿದೆ.

ಉದ್ಘೋಷಣೆ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ‘ಕರ್ನಾಟಕದ ಏಳು ಅದ್ಭುತಗಳು’ ಹೊಸ ಪ್ರವಾಸೋದ್ಯಮ ಮಾದರಿಗಳ ಸೃಷ್ಟಿಗೆ ದಿಕ್ಸೂಚಿಯಾಗಲಿವೆ. ಈ ಏಳು ಅಧಿಕೃತ ಅದ್ಭುತಗಳ ಪಟ್ಟಿಯಲ್ಲಿ ಒಂದಾಗಿರುವ ಹಿರೇಬಣಕಲ್ಲು ಅಭಿವೃದ್ಧಿಗೆ ಸಮಗ್ರ ವರದಿ ಸಿದ್ಧಪಡಿಸಲು ಈಗಾಗಲೇ ಸೂಚಿಸಿದ್ದೇನೆ. ಜತೆಗೆ ಏಳೂ ಅದ್ಭುತಗಳ ಸ್ಥಳದಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಬಗ್ಗೆ ನೀಲನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಕರ್ನಾಟಕದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಮಾತನಾಡಿ, ನಾನು ಪ್ರವಾಸೋದ್ಯಮ ಸಚಿವನಾದ ಬಳಿಕ ರಾಜ್ಯದ ಸಾಕಷ್ಟು ತಾಣಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಅದರ ಜತೆಗೆ ಇನ್ನಷ್ಟು ಕಾರ್ಯಗಳು ಆಗಬೇಕಿದೆ. ಏಳು ಅದ್ಭುತ ತಾಣಗಳ ಸಂರಕ್ಷಣೆ ನಿರಂತರವಾಗಿರಬೇಕು. ಆದರೆ, ನಾವಿನ್ನು ಕೆಲವೇ ದಿನಗಳಲ್ಲಿ ಚುನಾವಣೆಗೆ ಹೋಗುತ್ತಿದ್ದೇವೆ. ಪಕ್ಷಗಳು ಅಧಿಕಾರಕ್ಕೆ ಬರುತ್ತವೆ ಹೋಗುತ್ತವೆ. ಕಾರ್ಯಾಂಗವು ಈ ತಾಣಗಳ ರಕ್ಷಣೆಯನ್ನು ಮುಂದುವರೆಸಿಕೊಂಡು ಹೋಗಬೇಕು. ಈ ಕಾರ್ಯಕ್ಕೆ ಜನತೆ ಸಹಕರಿಸಬೇಕು. ಸರ್ಕಾರ ಯಾವುದೇ ಇರಲಿ ಜಿಲ್ಲಾಧಿಕಾರಿಗಳು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಇಂಥಹ ಹೊಣೆಗಾರಿಕೆ ನಿ‘ಬಾಯಿಸುವಲ್ಲಿ ಹಿಂದೆ ಬೀಳಬಾರದು ಎಂದರು.

‘ಕರ್ನಾಟಕದ 7 ಅದ್ಭುತಗಳು’ ಅಭಿಯಾನದ ರಾಯಬಾರಿ,  ನಟ ರಮೇಶ್ ಅರವಿಂದ್ ಮಾತನಾಡಿ, ಕರ್ನಾಟಕದಲ್ಲಿ ನೂರಾರು ಅದ್ಭುತಗಳಿವೆ. ಅವುಗಳಲ್ಲಿ ಏಳನ್ನು ಪ್ರಾತಿನಿಧಿಕವಾಗಿ ಆಯ್ಕೆ ಮಾಡಿ ಅದ ಮೇಲೆ ಬೆಳಕು ಚೆಲ್ಲುವ ಕೈಂಕರ್ಯಕ್ಕೆ ರಾಯಬಾರಿಯಾಗುವಂತೆ ನನ್ನನ್ನು ಕೇಳಿಕೊಂಡಾಗ ತಕ್ಷಣ ಪ್ರೀತಿಯಿಂದ ಒಪ್ಪಿಕೊಂಡೆ. ಪ್ರತಿವರ್ಷ ವಿಶ್ವ ಸುಂದರಿಯರು ಬದಲಾಗುತ್ತಾರೆ. ಆದರೆ, ಈ ಏಳು ಅದ್ಭುತಗಳೆಂದ ಈ ವಿಶ್ವ ಸುಂದರಿಯರು ನೂರಾರು ವರ್ಷಗಳಿಂದ ಸೌಂದರ್ಯ ಉಳಿಸಿಕೊಂಡಿವೆ. ಸರ್ವ ಕಾಲಕ್ಕೂ ಈ ಸೌಂದರ್ಯ ಹಾಗೇ ಇರಲಿದೆ. ನಮ್ಮ ಗ್ರಂಥಗಳಲ್ಲಿ ಸತ್ಯಂ ಶಿವಂ ಸುಂದರಂ ಎಂದು ತಿಳಿಸಿದಂತೆ ಒಂದು ವಿಚಾರ ಶಾಶ್ವತವಾಗಿ ಸುಂದರವಾಗಿರಬೇಕಾದರೆ ಅದರ ಹಿಂದೆ ಸತ್ಯ, ದೈವತ್ವ, ಸತ್ವ ಅಡಗಿರಬೇಕು. ಈ ಏಳು ಅದ್ಭುತಗಳು ನೋಟಕ್ಕೆ ಮಾತ್ರ ಸುಂದರವಾಗಿಲ್ಲ. ಅದರ ಜತೆಗೆ ನಮ್ಮತನ, ನಮ್ಮ ಸಂಸ್ಕೃತಿ , ನಮ್ಮ ಪರಂಪರೆಯನ್ನು  ಪ್ರತಿಬಿಂಬಿಸುಂತ ಸತ್ಯ, ಸತ್ವವನ್ನು ಒಳಗೊಂಡಿವೆ ಎಂದು ಬಣ್ಣಿಸಿದರು.
ಕೊಪ್ಪಳ ಜಿಲ್ಲಾಧಿಕಾರಿ ಸುಂದರೇಶ್ ಬಾಬು, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ವಿಜಯಪುರ ಜಿಲ್ಲಾಧಿಕಾರಿ ಮಹಾಂತೇಶ್ ದಾನಮ್ಮನವರ್, ಮೈಸೂರು ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ, ಶಿವಮೊಗ್ಗ ಜಿಲ್ಲಾಧಿಕಾರಿಗಳ ಪರವಾಗಿ ಸಾಗರ ಉಪವಿಭಾಗಾಧಿಕಾರಿ ಪಲ್ಲವಿ, ಉತ್ತರ ಕನ್ನಡ ಜಿಲ್ಲಾಾಧಿಕಾರಿ ಪ್ರಬಾಲಿಂಗ ಕವಳಿಕಟ್ಟಿ ಅವರು ವಿಜೇತ ತಾಣಗಳ ಪ್ರಮಾಣಪತ್ರ ಹಾಗೂ ಘೋಷಣಾ ಲಕ ಸ್ವೀಕರಿಸಿದರು. ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕನ್ನಡಪ್ರಭ ದಿನಪತ್ರಿಕೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸುದ್ದಿವಾಹಿನಿ ‘ಕರ್ನಾಟಕದ 7 ಅದ್ಭುತಗಳ’ ಆಯ್ಕೆಗೆ ಮಹಾ ಅಭಿಯಾನ ಕೈಗೊಂಡಿದ್ದವು.

ತೀರ್ಪುಗಾರರ ಸಮಿತಿ:

‘ಕರ್ನಾಟಕದ7 ಅದ್ಭುತಗಳು’ ಆಯ್ಕೆಗೆ ತೀರ್ಪುಗಾರರಾಗಿ ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್‌ನ ಅಧ್ಯಕ್ಷರೂ ಆಗಿರುವ ಸರಣಿ ಆತಿಥ್ಯ ಉದ್ಯಮಿ ಪ್ರಶಾಂತ್ ಪ್ರಕಾಶ್; 3 ಬಾರಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಸಂಗೀತಗಾರ, ವಿಶ್ವಸಂಸ್ಥೆಯ ಗುಡ್‌ವಿಲ್ ರಾಯಬಾರಿ, ಪರಿಸರವಾದಿ ರಿಕ್ಕಿ ಕೇಜ್; ವೈಲ್ಡ್ ಕರ್ನಾಟಕ, ಗಂಧದ ಗುಡಿ ಚಿತ್ರಗಳ ನಿರ್ದೇಶಕ, ನಿಸರ್ಗ ಛಾಯಾಚಿತ್ರಗಾರ ಅಮೋಘವರ್ಷ; ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಖ್ಯಾತ ಪುರಾತತ್ವ ಹಾಗೂ ಇತಿಹಾಸ ತಜ್ಞ ಡಾ. ದೇವರಕೊಂಡ ರೆಡ್ಡಿ; ವಿಶ್ವವಿಖ್ಯಾತ ವೇಗದ ಚಿತ್ರ ಕಲಾವಿದ ಹಾಗೂ ಯುವ ವಿಶ್ವ ಪ್ರವಾಸಿಗ ವಿಲಾಸ್ ನಾಯಕ್; ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ್; ಕನ್ನಡಪ್ರ‘ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಮಾ‘ಯಮ ಸಂಸ್ಥೆಗಳ ಪ್ರ‘ನ ಸಂಪಾದಕ ರವಿ ಹೆಗಡೆ ಪಾಲ್ಗೊಡಿದ್ದರು.

ಕರ್ನಾಟಕದ 7 ಅದ್ಭುತಗಳ ಪರಿಚಯ

ಹಿರೇಬೆಣಕಲ್ ಶಿಲಾ ಸಮಾಧಿಗಳು (ಬೃಹತ್ ಶಿಲಾಯುಗದ ಅದ್ಭುತ)

ಬಹುತೇಕ ಕನ್ನಡಿಗರಿಗೇ ಅಪರಿಚಿತವಾದ ಕರ್ನಾಟಕದ ಅದ್ಭುತ ಇದು. ಸುಮಾರು 3000-4000 ವರ್ಷಗಳಷ್ಟು ಹಳೆಯ ಇತಿಹಾಸ ಇರುವ ತಾಣ. ಕೊಪ್ಪಳ ಜಿಲ್ಲೆ ಗಂಗಾವತಿಯಿಂದ ಸುಮಾರು 10 ಕಿ.ಮೀ. ದೂರದ ಹಿರೇಬೆಣಕಲ್ ಗ್ರಾಾಮದ ಮೋರ್ಯಾರ ಗುಡ್ಡದಲ್ಲಿ ಆದಿಮಾನವ ನಿರ್ಮಿತ ಬೃಹತ್ ಶಿಲಾಯುಗದ ನೂರಾರು ಶಿಲಾಸಮಾಧಿಗಳು ಹಾಗೂ ಆದಿಮಾನವ ರಚಿತ ಗುಹಾಚಿತ್ರಗಳು ಇವೆ. ಲಂಡನ್ನಿನ ಸ್ಟೋೋನ್ ಹೆಂಜಸ್, ಈಜಿಪ್ಟಿನ ಪಿರಮಿಡ್ಡುಗಳು, ಬಹರೈನಿನ ದಿಲ್ಮನ್ ಸಮಾಧಿ ದಿಬ್ಬಗಳಂತೆ – ಸಾವಿನ ಗೌರವ ಸೂಚಕಗಳು – ಈ ಶಿಲಾಸಮಾಧಿ ಡೋಲ್ಮನ್‌ಗಳು. ವಿಶ್ವದ ಹಲವೆಡೆ ಇಂಥ ಡೋಲ್ಮನ್‌ಗಳು ಇದ್ದು, ಕೊರಿಯಾ ಒಂದರಲ್ಲೇ ವಿಶ್ವದ ಶೇ.10ರಷ್ಟು ಡೋಲ್ಮನ್‌ಗಳು ಪತ್ತೆಯಾಗಿವೆ. ‘ಾರತದಲ್ಲಿ ಹಲವೆಡೆ ಈ ಶಿಲಾಸಮಾಧಿಗಳು ಪತ್ತೆೆಯಾಗಿವೆಯಾದರೂ, ಹಿರೇಬೆಣಕಲ್ ಮೋರ್ಯಾರ ಗುಡ್ಡ ಇಡೀ ದಕ್ಷಿಣ ಭಾರತದಲ್ಲೇ ಅತಿದೊಡ್ಡ ಮೆಗಾಲಿಥಿಕ್ ತಾಣವಾಗಿದೆ. ಒಂದು ಅಡಿಯ ಶಿಲಾಸಮಾಧಿಯಿಂದ ಹಿಡಿದು 10 ಅಡಿ ಶಿಲಾಚಪ್ಪಡಿಯ ಸಮಾಧಿಗಳು ಮೂರು-ನಾಲ್ಕು ಸಾವಿರ ವರ್ಷಗಳ ಪ್ರಾಕೃತಿಕ ಹೊಡೆತಗಳನ್ನು ತಾಳಿಯೂ ಇನ್ನೂ ಗಟ್ಟಿಯಾಗಿ ನಿಂತಿರುವುದು ನಿಜಕ್ಕೂ ಅದ್ಭುತ. ಕರ್ನಾಟಕದಲ್ಲಿ ಇರುವ ಇಂಥ ಅನೇಕ ಪ್ರಾಗೈತಿಹಾಸಿಕ ತಾಣಗಳ ಪ್ರಾತಿನಿಧಿಕ ಅದ್ಭುತವೇ ಹಿರೇಬೆಣಕಲ್ ಮೋರ್ಯಾರ ಗುಡ್ಡದ ಶಿಲಾ ಸಮಾಧಿಗಳು.
ಹಂಪಿ (ಪುರಾತತ್ವ ಅದ್ಭುತ)

ರೋಮ್ ನಂತೆ ಇಡೀ ಹಂಪಿಯೇ ಒಂದು ಅದ್ಭುತ. ಇದನ್ನು ಜಗತ್ತಿನ ಅತಿದೊಡ್ಡ ಓಪನ್ ಏರ್ ಆರ್ಕಿಯಾಲಜಿಕಲ್ ಮ್ಯೂಸಿಯಂಗಳಲ್ಲಿ ಒಂದು ಎಂದು ಹೇಳಬಹುದು. ಇಲ್ಲಿನ ಶಿಲ್ಪಕಲಾ ವೈಭವ, ಶಿಲ್ಪಕಲಾ ವೈವಿಧ್ಯ, ನೂರಾರು ಸ್ಮಾಾರಕಗಳು, ಜಗತ್ಪ್ರಸಿದ್ಧ. ಹಂಪಿಯ ಕಲ್ಲಿನ ರಥ ಯಾರಿಗೆ ಗೊತ್ತಿಲ್ಲ ಹೇಳಿ. ಇಲ್ಲಿನ ಕಲ್ಲುಕಲ್ಲಿನಲಿ ಶಿಲೆಗಳು ಸಂಗೀತ ನುಡಿಸುತ್ತವೆ ಎಂಬುದು ಅಕ್ಷರಶಃ ನಿಜ. ಇದಕ್ಕೆ ವಿಜಯ ವಿಠ್ಠಲ ದೇವಾಲಯದ ಸಂಗೀತ ಕಂಬಗಳಿಂದ ಹಿಡಿದು, ಮಹಾನವಮಿ ದಿಬ್ಬದ ಬಳಿ ಇರುವ ಕಲ್ಲಿನ ಊಟದ ತಟ್ಟೆಗಳವರೆಗೆ ಅನೇಕ ಸಾಕ್ಷಾತ್ ನಿದರ್ಶನಗಳಿವೆ. ಅಲ್ಲದೆ, ಹಂಪಿಯ ಸುತ್ತ ಇರುವ ಬಂಡೆ ಬೆಟ್ಟಗಳ ಪರಿಸರ ಕರ್ನಾಟಕದ ವೈವಿಧ್ಯಮಯ ನಿಸರ್ಗ ಸೌಂದರ್ಯಕ್ಕೆ ಪ್ರತ್ಯೇಕ ಮೆರುಗನ್ನೇ ನೀಡಿದೆ. ಕರ್ನಾಟಕದಲ್ಲಿ ಹಂಪಿಯಂಥ ಹಲವಾರು ಶಿಲ್ಪಕಲೆಯ ಪುರಾತತ್ವ ಅದ್ಭುತಗಳಿವೆ. ಪ್ರತಿಯೊಂದೂ ತಾವೇ ತಾವಾಗಿ ಒಂದೊಂದು ಅದ್ಭುತ ಎನಿಸಿಕೊಳ್ಳಬೇಕಾದಂಥವು. ಬೇಲೂರು ಚನ್ನಕೇಶವ ದೇವಾಲಯ ಭಾರತೀಯ ಶಿಲ್ಪಕಲೆಯ ಔನ್ನತ್ಯಕ್ಕೆ ಉದಾಹರಣೆ. ಹಳೇಬೀಡು, ಪಟ್ಟದಕಲ್ಲು ದೇವಾಲಯಗಳು ಒಂದೆಡೆಯಾದರೆ ಐಹೊಳೆಯು ಭಾರತೀಯ ದೇವಾಲಯ ಶಿಲ್ಪಕಲೆಯ ತೊಟ್ಟಿಲು ಎಂದೇ ಖ್ಯಾಾತ. ಬಾದಾಮಿಯ ಗುಹಾಂತರ ದೇವಾಲಯಗಳೂ ಏನೂ ಕಡಿಮೆ ಇಲ್ಲ. ಲಕ್ಕುಂಡಿ, ತಲಕಾಡು ಸೇರಿದಂತೆ ಕರ್ನಾಟಕಾದ್ಯಂತ ಇರುವ ಇಂಥ ಹಲವಾರು ಪುರಾತತ್ವ ವೈ‘ವದ ಪ್ರಾತಿನಿಧಿಕ ಅದ್ಭುತವೇ ಹಂಪಿ.

ಶ್ರವಣಬೆಳಗೊಳದ ಗೊಮ್ಮಟೇಶ್ವರ (ತಾತ್ವಿಕ ಅದ್ಭುತ)

ಪ್ರಪಂಚದ ಏಳು ಅದ್ಭುತಗಳಲ್ಲಿ ಒಂದಾದ ರಿಯೋ-ಡಿ-ಜನೈರೋದ ಕಿಸ್ತನ ಪ್ರತಿಮೆ ಹೇಗೋ, ನಮಗೆ ಕರ್ನಾಟಕದ ಶ್ರವಣಬೆಳಗೊಳದ ಗೊಮ್ಮಟೇಶ್ವರ ಪ್ರತಿಮೆ ಹಾಗೆ. ಇತ್ತೀಚೆಗೆ ರಾಜ್ಯದಲ್ಲಿ ಅತಿ ಎತ್ತರದ ಅನೇಕ ಏಕಶಿಲಾ ಪ್ರತಿಮೆಗಳು ರಚನೆಯಾಗುತ್ತಿದ್ದರೂ ಶ್ರವಣಬೆಳಗೊಳದ ಗೊಮ್ಮಟನ ನೂರಾರು ವರ್ಷದ ಇತಿಹಾಸಕ್ಕೆ ಅದ್ಯಾವುದೂ ಸಮವಾಗಲಾರದು. ಶ್ರವಣಬೆಳಗೊಳದ ಬಾಹುಬಲಿ – ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದು ಎಂದು ಆಯ್ಕೆಯಾಗಲು ಈ ಪ್ರತಿಮೆ ಜಗತ್ತಿನಾದ್ಯಂತ ಪ್ರಸಿದ್ಧ ಎನ್ನುವುದಷ್ಟೇ ಕಾರಣವಲ್ಲ. ಈ ಪ್ರತಿಮೆ ಕನ್ನಡನಾಡಿನ ಸಮರ-ಶಾಂತಿ ತತ್ವದ ಪ್ರಾತಿನಿಧಿಕ ಕುರುಹು. ‘ರತ-ಬಾಹುಬಲಿಯ ಕಥೆಯನ್ನೊಮ್ಮೆ ಅವಲೋಕಿಸಿ. ನಾವು ಕನ್ನಡಿಗರೂ ಅಷ್ಟೇ ಸಮರಕ್ಕೂ ಸಿದ್ಧ, ಶಾಂತಿಗೂ ಬದ್ಧ. ನಮ್ಮ ಅಪಾರ ಶಕ್ತಿ ಸಾಮರ್ಥ್ಯ ಯಾರ ಮೇಲೋ ದಬ್ಬಾಾಳಿಕೆ ನಡೆಸಲು ಅಲ್ಲ. ‘ರತನಂತೆ ಯಾರಾದರೂ ನಮ್ಮ ಮೇಲೆ ಹೋರಾಟಕ್ಕೆ ಇಳಿದಾಗ ಬಾಹುಬಲಿಯಾಗಿ ಅವರನ್ನು ಹೊಸಕಿ ಹಾಕುವುದು ನಮಗೆ ಕಷ್ಟವಲ್ಲ. ಆದರೂ ನಮ್ಮಷ್ಟಕ್ಕೆ ನಾವು ಗೊಮ್ಮಟನಂತೆ ಶಾಂತಿ ಪ್ರಿಯರು. ನಮ್ಮ ಈ ಸಮರಕ್ಕೂ ಸಿದ್ಧ, ಶಾಂತಿಗೂ ಬದ್ಧ ತತ್ವದ ಪ್ರಾಾತಿನಿಧಿಕ ಅದ್ಭುತವೇ ಶ್ರವಣಬೆಳಗೊಳದ ಗೊಮ್ಮಟೇಶ್ವರ. ಅಷ್ಟೇ ಅಲ್ಲ, ಜಗತ್ತಿಿಗೆ ಅನೇಕ ತತ್ವಾಾದರ್ಶಗಳನ್ನು ನೀಡಿದ ಕನಕ, ಪುರಂದರ, ಬಸವ, ಶಿಶುನಾಳ ಶರೀ ಮುಂತಾದ ಎಲ್ಲ ಕನ್ನಡನಾಡಿನ ಮಹನೀಯರ ತಾತ್ವಿಕ ಪ್ರತಿನಿಧಿಯೂ ಹೌದು ಈ ಅದ್ಭುತ.

ಗೋಲ ಗುಮ್ಮಟ (ವಾಸ್ತು ವಿಜ್ಞಾನ ಅದ್ಭುತ)

ಜಗತ್ತಿನ 7 ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಶ್ವೇತ ಸುಂದರಿಯಾದರೆ, ಕರ್ನಾಟಕದ ಗೋಲ ಗುಮ್ಮಟ ಕೃಷ್ಣ ಸುಂದರಿ. ಜಗತ್ತಿನ ಅತಿ ದೊಡ್ಡ ಗುಮ್ಮಟಗಳಲ್ಲಿ ಒಂದು ವಿಜಯಪುರದ ಗೋಲ ಗುಮ್ಮಟ. ಇಂಡೋ-ಸಾರ್ಸೆನಿಕ್ ಶೈಲಿಯ ಈ ಬೃಹತ್ ಸ್ಮಾರಕ ಆದಿಲ್ ಶಾಹಿ ರಾಜಮನೆತನದ ಮಹಾನ್ ಸಮಾಧಿಯಾದರೂ ಪುರಾತತ್ವ ವಾಸ್ತುಶಾಸ್ತ್ರ, ರೇಖಾಗಣಿತ ಮತ್ತು ಶಬ್ದವಿಜ್ಞಾನಕ್ಕೂ ಅತ್ಯುತ್ತಮ ಉದಾಹರಣೆ. ನಾಲ್ಕು ಗೋಡೆಗಳ ಮೇಲೆ, ನಡುವೆ ಯಾವುದೇ ಆಧಾರಗಳಿಲ್ಲದೆ ಬಹುದೊಡ್ಡ ಗುಮ್ಮಟವೊಂದನ್ನು ನಿರ್ಮಿಸಿರುವುದು ವಾಸ್ತುಶಾಸ್ತ್ರಜ್ಞರ ಅಪ್ರತಿಮ ಕೌಶಲ್ಯಕ್ಕೆ ಸಾಕ್ಷಿ. ಅದಕ್ಕಿತ ಈ ಗುಮ್ಮಟದ ಶಬ್ದಚಾತುರ್ಯ ಅಮೋಘವಾದುದು. ಗುಮ್ಮಟದ ಒಂದು ಬದಿಯಲ್ಲಿ ಪಿಸುಮಾತನ್ನಾಾಡಿದರೂ ಅಷ್ಟು ದೂರದ ಇನ್ನೊೊಂದು ತುದಿಯಲ್ಲಿ ಸ್ಪಷ್ಟವಾಗಿ ಕೇಳಿಸುತ್ತದೆ. ಗುಮ್ಮಟದಲ್ಲಿ ಒಂದು ಕೂಗು ಏಳು ಬಾರಿ ಮಾರ್ದನಿಸುತ್ತದೆ. ಈ ಶಬ್ದವೈಚಿತ್ರ್ಯವನ್ನು, ರೇಖಾಗಣಿತ ಆಧಾರಿತ ಕಟ್ಟಡ ವೈವಿಧ್ಯವನ್ನು ಪ್ರತಿನಿಧಿಸುವ ಕರ್ನಾಟಕದ ಅದ್ಭುತವೇ ಗೋಲ ಗುಮ್ಮಟ. ಅಷ್ಟೇ ಅಲ್ಲದೆ, ಕರ್ನಾಟಕದ ಅನೇಕ ಪ್ರಾಾಚೀನ ಹಾಗೂ ಆಧುನಿಕ ವಾಸ್ತು ವಿಜ್ಞಾನದ ಪ್ರಾಾತಿನಿಧಿಕವೂ ಹೌದು ಈ ಅದ್ಭುತ.
ಮೈಸೂರು ಅರಮನೆ (ರಾಜಪರಂಪರಾ ಅದ್ಭುತ)

ಭಾರತದ ಅತ್ಯಂತ ಸುಂದರ ಅರಮನೆಗಳಲ್ಲಿ ಒಂದು ಮೈಸೂರಿನ ಅರಮನೆ ಎಂದೇ ಖ್ಯಾಾತವಾದ ಮೈಸೂರಿನ ಅಂಬಾವಿಲಾಸ ಅರಮನೆ. ಕರ್ನಾಟಕದ ಗತವೈಭವವನ್ನು ಭವ್ಯವಾಗಿ ಬಿಂಬಿಸುವ ಈ ಅರಮನೆ ದೀಪಾಲಂಕಾರಗೊಂಡಾಗಲಂತೂ ಬಂಗಾರದ ಅರಮನೆಯಂತೆಯೇ ಭಾಸವಾಗುತ್ತದೆ. ತಾಜ್ ಮಹಲಿನಷ್ಟೇ ಪ್ರವಾಸಿಗರನ್ನು ಸೆಳೆಯುವ ಈ ಅರಮನೆ ಕರ್ನಾಟಕ ಪ್ರವಾಸೋದ್ಯಮದ ಅತ್ಯಂತ ಪ್ರಮುಖ ಆಕರ್ಷಣೆಯೂ ಹೌದು. ಕರ್ನಾಟಕದ 7 ಅದ್ಭುತಗಳಲ್ಲಿ ಒಂದಾಗಿ ಇದು ಆಯ್ಕೆಯಾಗಲು ಇಷ್ಟೇ ಕಾರಣವಲ್ಲ. ಸುಮಾರು 400 ವರ್ಷಗಳ ಇತಿಹಾಸ ಇರುವ ರಾಜಪರಂಪರೆಯ ಮೈಸೂರು ದಸರಾ ಹಬ್ಬ ಇಂದಿಗೂ ಸಜೀವ ಸಂಸ್ಕೃತಿಯಾಗಿ ವಿಜೃಂಭಣೆಯಿಂದ ಆಚರಣೆಯಾಗುತ್ತಿದೆ. ಅಲ್ಲದೆ, ಮೈಸೂರಿನ ಒಡೆಯರು, ಅಭಿವೃದ್ಧಿ, ಆಧುನಿಕತೆ, ಆಡಳಿತದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದರು. ಅಣೆಕಟ್ಟೆ, ನೀರಾವರಿ, ವಿದ್ಯುತ್, ಬೀದಿದೀಪ, ಚಿನ್ನದ ಗಣಿ, ರೈಲ್ವೆಯಂತಹ ಅನೇಕ ಪ್ರಗತಿಪರ ಕೈಂಕರ್ಯದಲ್ಲಿ ಅಗ್ರಗಣ್ಯರಾಗಿದ್ದ ಮೈಸೂರು ಅರಸರು ದೇಶದ ಸ್ವಾಾತಂತ್ರ್ಯಕ್ಕೂ ಮುನ್ನವೇ ಪ್ರಜಾಪ್ರತಿನಿಧಿ ಸಭೆಯನ್ನೂ ನಡೆಸಿ ದೇಶಕ್ಕೇ ಮಾದರಿಯಾಗಿದ್ದರು. ಕರ್ನಾಟಕದಲ್ಲಿ ವಿಜಯನಗರ ಅರಸರು, ಕದಂಬರು, ರಾಷ್ಟ್ರಕೂಟರು, ಹೊಯ್ಸಳರು, ಚಾಲುಕ್ಯರು. ಹೀಗೆ ಅನೇಕ ಹಿರಿ-ಕಿರಿಯ ಸಂಸ್ಥಾಾನಗಳ ಶ್ರೇಷ್ಠ ರಾಜಪರಂಪರೆಯಿದೆ. ಈ ಎಲ್ಲ ರಾಜ-ರಾಣಿಯರ ಕೊಡುಗೆ, ದಿಟ್ಟ, ‘ವ್ಯ ಪರಂಪರೆಯ ಪ್ರಾತಿನಿಧಿಕ ಅದ್ಭುತವೇ ಮೈಸೂರು ಅರಮನೆ.

ಜೋಗ ಜಲಪಾತ (ನೈಸರ್ಗಿಕ ಅದ್ಭುತ – ನೆಲ)

ಭಾರತದ ಅತ್ಯಂತ ಸುಂದರ ಹಾಗೂ ಬೃಹತ್ ಜಲಪಾತಗಳಲ್ಲಿ ಜೋಗ ಜಲಪಾತ ಅಗ್ರ ಪಂಕ್ತಿಿಯಲ್ಲಿ ನಿಲ್ಲುತ್ತದೆ. 830 ಅಡಿ ಎತ್ತರದಿಂದ ಧುಮುಕುವ ಜೋಗ ಜಲಪಾತ ಮಳೆಗಾಲದಲ್ಲಂತೂ ನೀರಿನಿಂದ ತುಂಬಿ ರಾಜಗಾಂಭೀರ್ಯವನ್ನು ಪಡೆಯುತ್ತದೆ. ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುವ ಜೋಗ ಕರ್ನಾಟಕ ಪ್ರವಾಸೋದ್ಯಮದ ಅತ್ಯಂತ ಪ್ರಮುಖ ಆಕರ್ಷಣೆಯಲ್ಲಿ ಒಂದು. ಕರ್ನಾಟಕದ 7 ಅದ್ಭುತಗಳಲ್ಲಿ ಒಂದಾಗಿ ಇದು ಆಯ್ಕೆಯಾಗಲು ಇವಿಷ್ಟೇ ಕಾರಣವಲ್ಲ. ಜೀವವೈವಿಧ್ಯಗಳಿಂದ ಶ್ರೀಮಂತವಾಗಿರುವ ಪಶ್ಚಿಮ ಘಟ್ಟಗಳು ಭೂಮಿಯ ಅತಿ ಅಪರೂಪದ ಕಾಡುಗಳಲ್ಲಿ ಒಂದು. ಅಂತಹ ಅದ್ಭುತ ನಿಸರ್ಗದಲ್ಲಿರುವ ಜೋಗದ ಪರಿಸರಲ್ಲಿ ಕರ್ನಾಟಕದ ಅಪರೂಪದ ಸಸ್ಯ ಹಾಗೂ ಪ್ರಾಾಣಿಸಂಕುಲಗಳೂ ಇವೆ. ಶೋಲಾ ಕಾಡುಗಳಿಂದ ಹಿಡಿದು ದಟ್ಟ ನಿತ್ಯಹರಿದ್ವರ್ಣ ಕಾಡುಗಳವರೆಗೆ ಕರ್ನಾಟಕದಲ್ಲಿ 6 ವೈವಿಧ್ಯ ಕಾಡುಗಳಿವೆ. ನಾಗರಹೊಳೆ, ದಾಂಡೇಲಿಯಂಥ ಹುಲಿ ಸಂರಕ್ಷಿತ ಅಭಯಾರಣ್ಯಗಳಿವೆ.  ಕುದುರೆಮುಖ, ಕೊಡಗು, ಕೊಡಚಾದ್ರಿಯಂಥ ಹಸಿರು ಗಿರಿಧಾಮಗಳಿವೆ. ಶರಾವತಿಯಲ್ಲದೆ ಕಾವೇರಿ, ಕೃಷ್ಣ, ತುಂಗಭದ್ರಾದಂಥ ಅನೇಕ ಹಿರಿ-ಕಿರಿಯ ನದಿಗಳಿವೆ. ಹೆಬ್ಬೆ, ಗೋಕಾಕ್‌, ಗಗನಚುಕ್ಕಿ, ‘ರಚುಕ್ಕಿ, ಉಂಚಳ್ಳಿಯಂಥ ಹಲವಾರು ಸುಂದರ ಜಲಪಾತಗಳಿವೆ. ಈ ಎಲ್ಲ ಕರ್ನಾಟಕದ ನೆಲದ ಸೌಂದರ್ಯ ಮತ್ತು ಮಹತ್ವಗಳ ಪ್ರಾಾತಿನಿಧಿಕ ಅದ್ಭುತವೇ ಜೋಗ ಜಲಪಾತ.

ನೇತ್ರಾಾಣಿ ದ್ವೀಪ (ನೈಸರ್ಗಿಕ ಅದ್ಭುತ – ಜಲ)

ಕರ್ನಾಟಕದ ಅದ್ಭುತಗಳೆಂದರೆ ಬರೀ ನೆಲದ ಮೇಲಿನ ಅದ್ಭುತಗಳಷ್ಟೇ ಅಲ್ಲ. ಕರ್ನಾಟಕದ ಅರಬ್ಬಿ ಸಮುದ್ರ ಕೂಡ ಅದ್ಭುತವೇ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಬಳಿ ಇರುವ ನೇತ್ರಾಣಿ ದ್ವೀಪ ಪ್ರೀತಿಯ ಸಂಕೇತದಂತೆ ಹೃದಯಾಕಾರದಲ್ಲಿದೆ. ಈ ದ್ವೀಪದ ಸುತ್ತ ಇರುವ ಸಮುದ್ರ ಎಷ್ಟು ಅದ್ಭುತವಾಗಿದೆಯೆಂದರೆ, ಸ್ಕೂಬಾ ಡೈವಿಂಗ್ ಮಾಡಲು ಭಾರತದಲ್ಲಿ ನೇತ್ರಾಾಣಿ ದ್ವೀಪ ಎರಡನೇ ಅತ್ಯುತ್ತಮ ಪ್ರದೇಶ. ಒಂದನೇ ಅತ್ಯುತ್ತಮ ಪ್ರದೇಶ ಅಂಡಮಾನ್ ದ್ವೀಪ. ನೇತ್ರಾಣಿ ದ್ವೀಪದ ಕಡಲ ಗ‘ರ್ದಲ್ಲಿ ಆರೋಗ್ಯಕರ ಹವಳದ ಬಂಡೆಗಳಿವೆ. ಅಪರೂಪದ ಜಲಚರಗಳಿವೆ. ಸಾಗರ ಸಸ್ಯಗಳಿವೆ. ಇನ್ನೊಂದು ಗಮನೀಯ ವಿಚಾರ ಎಂದರೆ, ದೇಶದ ಎಲ್ಲ ರಾಜ್ಯಗಳಿಗೂ ಸಮುದ್ರ ಸೌಂದರ್ಯವಿಲ್ಲ. ಆದರೆ, ಕರ್ನಾಟಕದಲ್ಲಿ 310 ಕಿ.ಮೀ.ಯಷ್ಟು ಅದ್ಭುತ ಸಮುದ್ರ ಕಿನಾರೆಯಿದೆ. ನೇತ್ರಾಾಣಿ ಬಳಿ ಇರುವ ಮುರುಡೇಶ್ವರ ಈಗಾಗಲೇ ಕರ್ನಾಟಕದ ಪ್ರವಾಸೋದ್ಯಮದಲ್ಲಿ ಪ್ರಮುಖ ಸ್ಥಾನ ಪಡೆದಿದ್ದು ರಾಜ್ಯದ ಸಾಗರ ಪ್ರವಾಸೋದ್ಯಮಕ್ಕೆ ಇನ್ನಷ್ಟು ಹೇರಳ ಅವಕಾಶಗಳನ್ನು ಹೊಂದಿದೆ. ಇದರಿಂದ ಕರ್ನಾಟಕದ ಎಲ್ಲ ಸಮುದ್ರ ಕಿನಾರೆಗಳ ಪ್ರಾತಿನಿಧಿಕ ಅದ್ಭುತವೇ ನೇತ್ರಾಣಿ ದ್ವೀಪ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಮಂಗಳೂರು: 4 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

Next Post

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ : 5 ಮಂದಿ ಆರೋಪಿಗಳು ದೋಷಿ – ನ್ಯಾಯಾಲಯ ತೀರ್ಪು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ : 5 ಮಂದಿ ಆರೋಪಿಗಳು ದೋಷಿ - ನ್ಯಾಯಾಲಯ ತೀರ್ಪು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL