ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಪಿ.ಬಿ. ವರಾಳೆ P B Varale ಅವರನ್ನು ಕರ್ನಾಟಕದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಈ ಕುರಿತಂತೆ ಟ್ವಿಟರ್’ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಪ್ರಸನ್ನ ಬಿ. ವರಾಳೆ ಅವರನ್ನು ಕರ್ನಾಟಕದ ಮುಖ್ಯನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿ ಎ.ಎಂ. ಮಾಗೇರ್ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್ ಮಿತ್ತಲ್ ಅವರನ್ನು ರಾಜಸ್ಥಾನ ಹೈಕೋರ್ಟ್ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
Also read: ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಚಂದ್ರಚೂಡ್ ಹೆಸರು ಶಿಫಾರಸ್ಸು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post