ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಡಿ.23ರಂದು ಕವಿ, ಲೇಖಕ, ಸಂಶೋಧಕ ಡಾ. ಸತ್ಯಮಂಗಲ ಮಹಾದೇವ ಅವರು ಬೇಂದ್ರೆ ಮತ್ತು ಮಧುರಚೆನ್ನರ ಕಾವ್ಯಗಳಲ್ಲಿ ಅನುಭಾವದ ಸ್ವರೂಪ-ತೌಲನಿಕ ಅಧ್ಯಯನ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನೆಯ ಸಾರರೂಪದ ’ಕಂಗಳ ಬೆಳಗು’ ಈ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು, ಗಾಂಧಿ ಶಾಂತಿ ಪ್ರತಿಷ್ಠಾನ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪ್ರಕಾಶನ ಸಹಯೋಗದಲ್ಲಿ ಗಾಂಧಿಭವನದ ಕಸ್ತೂರಬಾ ಸಭಾಂಗಣದಲ್ಲಿ ಸಂಜೆ 6 ಘಂಟೆಗೆ ಆಯೋಜಿಸಲಾಗಿದೆ.

ಹಿರಿಯ ವಿದ್ವಾಂಸರು ಹಾಗೂ ಧಾರವಾಡದ ಡಾ.ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ನಿಕಟಪೂರ್ವ ಅಧ್ಯಕ್ಷರಾದ ಡಾ. ಶ್ಯಾಮಸುಂದರ ಬಿದರಕುಂದಿ ಅವರು ’ಕಂಗಳ ಬೆಳಗು’ ಕೃತಿಯ ಲೋಕಾರ್ಪಣೆ ನೆರವೇರಿಸಲಿದ್ದಾರೆ.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಸಿದ್ಧ ಅಂಕಣಕಾರರು, ವಿಮರ್ಶಕರೂ ಆದ ಡಾ.ಟಿ.ಎನ್. ವಾಸುದೇವ ಮೂರ್ತಿ ಕೃತಿ ಪರಿಚಯ ನಡೆಸಿಕೊಡಲಿದ್ದಾರೆ. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಹಾಗೂ ಕೃತಿಯ ಲೇಖಕರಾದ ಸತ್ಯಮಂಗಲ ಮಹಾದೇವರವರು ಉಪಸ್ಥಿತರಿರುತ್ತಾರೆ ಎಂದು ಅನ್ನಪೂರ್ಣ ಪ್ರಕಾಶನದ ಬಿ.ಕೆ. ಸುರೇಶ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















